ಬೆಂಗಳೂರು: ನಾಳೆ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರ ನಡೆಸಲು ನಿರ್ಧರಿಸಿದ್ದು, ಪೆಟ್ರೋಲ್, ಡೀಸೆಲ್ ಪೂರೈಕೆಯಲ್ಲಿ ವ್ಯತ್ಯವಾಗುವ ಸಾಧ್ಯತೆ ದಟ್ಟವಾಗಿದೆ.
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಪೆಟ್ರೋಲ್, ಡೀಸೆಲ್ ಖರೀದಿ ಬಂದ್ ಮಾಡಲಿದ್ದಾರೆ. ಬಂಕ್ ನಲ್ಲಿ ಸ್ಟಾಕ್ ಇರುವ ಪೆಟ್ರೋಲ್, ಡೀಸೆಲ್ ಮಾತ್ರ ಮಾರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಎರಡು ಬಾರಿ ಪೆಟ್ರೋಲ್, ಡೀಸೆಲ್ ಮೇಲಿನ ಟ್ಯಾಕ್ಸ್ ಕಡಿತಗೊಳಿಸಿದೆ. ನಾವು ಖರೀದಿಸಿದ್ದ ತೈಲಕ್ಕೆ ನೀಡಿದ್ದ ತೆರಿಗೆ ಮರುಪಾವತಿ ಮಾಡಿಲ್ಲ. ಹೀಗಾಗಿ ಪ್ರತಿ ಡೀಲರ್ ಗೆ 7-8 ಲಕ್ಷ ನಷ್ಟವಾಗಿದೆ. ತೈಲ ಕಂಪನಿಗೆ ಮೊದಲೇ ಕಟ್ಟಿದ್ದ ತೆರಿಗೆ ಮರುಪಾವತಿಸಬೇಕು. ಬೇಡಿಕೆಗೆ ತಕ್ಕಂತೆ ಪೆಟ್ರೋಲ್, ಡೀಸೆಲ್ ಪೂರೈಸಬೇಕು ಎಂದು ಮಾಲೀಕರು ಆಗ್ರಹಿಸಿದ್ದಾರೆ.