ಬೆಳಗಾವಿ: ಕೇಂದ್ರದ ಕೃಷಿ ಕಾಯ್ದೆ ಜಾರಿ ವಿರೋಧಿಸಿ ರೈತ ಸಂಘಟನೆಗಳ ನೇತೃತ್ವದಲ್ಲಿ ನಾಳೆ ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ಪ್ರತಿಭಟನೆ ಹೆಸರಲ್ಲಿ ಜನರಿಗೆ ತೊಂದರೆ ಕೊಡುವುದು ಬೇಡ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ರೈತ ಮುಖಂಡರ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಈಗಷ್ಟೇ ಆರ್ಥಿಕ ಚಟುವಟಿಕೆಗಳು ಆರಂಭವಾಗಿದೆ. ಕೋವಿಡ್ ನಿಂದ ಜನರು, ರೈತರು ಸಮಸ್ಯೆ ಅನುಭವಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಮತ್ತೆ ಬಂದ್ ನಡೆಸಿ ತೊಂದರೆ ಕೊಡುವುದು ಸರಿಯಲ್ಲ. ಧರಣಿ ನಿರತರು ಎಲ್ಲಾ ಚಟುವಟಿಕೆಗಳಿಗೆ ಸಹಕಾರ ಕೊಡಬೇಕು ಎಂದರು.
ನಾಳೆ ಭಾರತ ಬಂದ್: ಯಾರ್ ಬೆಂಬಲ ಕೊಡ್ಲಿ, ಬಿಡ್ಲಿ ಬಂದ್ ಯಶಸ್ಸಿಗೆ ಎಲ್ಲ ಕ್ರಮ
2019-20ರಲ್ಲಿ ಪ್ರವಾಹದಿಂದಾಗಿ ಹಲವು ಮನೆಗಳಿಗೆ ಹಾನಿಯಾಗಿವೆ. ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ಕೆಲಸ ಮಾಡುತ್ತಿದೆ. ಈಗಾಗಲೇ ಪರಿಹಾರ ಕಾರ್ಯ ಆರಂಭವಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ 44,205 ಮನೆಗಳಿಗೆ ಪರಿಹಾರ ನೀಡಲಾಗಿದೆ. ಬೆಳೆ ಹಾನಿಗೆ 1.63 ಲಕ್ಷ ರೈತರಿಗೆ ಪರಿಹಾರ ಕೊಟ್ಟಿದ್ದೇವೆ. ಕಬ್ಬು ಬೆಳೆಗಾರರಿಗೆ ಬಾಕಿ ಹಣ ಪಾವತಿಸಲು ಸೂಚಿಸುತ್ತೇವೆ ಎಂದು ತಿಳಿಸಿದರು.