alex Certify BIG NEWS : ನಾಳೆ ರಾಜ್ಯಾದ್ಯಂತ ‘K-SET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಾಳೆ ರಾಜ್ಯಾದ್ಯಂತ ‘K-SET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ಬೆಂಗಳೂರು : ನವೆಂಬರ್ 24 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುತ್ತಿರುವ ಕೆ-ಸೆಟ್-2024 ಪರೀಕ್ಷೆಗೆ ಸಕಲ ಸಿದ್ದತೆ ನಡೆಸಲಾಗುತ್ತಿದೆ.

ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಪರೀಕ್ಷಾ ನಿಯೋಜಿತ ಸಿಬ್ಬಂದಿಗಳು ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳನ್ನು ಸ್ವೀಕರಿಸುವಾಗ, ಪರೀಕ್ಷೆ ಮುಗಿದು ಬಂಡಲ್ ಮಾಡುವಾಗ ಜಾಗರೂಕತೆಯಿಂದ ಕಾಳಜಿ ವಹಿಸಬೇಕು.

ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್ ಗಳನ್ನು ಅನುಮತಿ ಇರುವುದಿಲ್ಲ. ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ ಗಳನ್ನು ಧರಿಸುವುದು. ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು. ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ ,ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.

ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಅಂದರೆ ಜಿಪ್ ಪಾಕೇಟ್, ಪಾಕೇಟ್‍ಗಳು, ದೊಡ್ಡ ಬಟನ್‍ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ. ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸಬಾರದು.

ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‍ಗಳು ಅಥವಾ ಬಟನ್‍ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವ ಆಗಿಲ್ಲ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು, ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸಬೇಕು. ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ,ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಆಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯ. ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸಬಾರದು. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).

ನಿಷೇಧಿತ ವಸ್ತುಗಳ ಪಟ್ಟಿ: ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜೊತೆಗೆ, ಕೆಳಗೆ ಪಟ್ಟಿ ಮಾಡಲಾದ ಪರೀಕ್ಷಾ ಕೇಂದ್ರಕ್ಕೆ ಯಾವುದೇ ನಿಷೇಧಿತಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್ಗಳು, ಪೆನ್ ಡ್ರೈವ್‍ಗಳು, ಇಯರ್ ಫೋನ್ಗಳು, ಮೈಕ್ರೋಫೋನ್ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ. ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗೂ ತಿನ್ನುವುದನ್ನು ನಿಷೇಧಿಸಲಾಗಿದೆ, ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ. ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ. ತಲೆಯ ಮೇಲೆ ಟೋಪಿ ಧರಿಸಿಬಾರದು. ಯಾವುದೇ ರೀತಿಯ ಮಾಸ್ಕನ್ನು ಧರಿಸುವಂತಿಲ್ಲ.

ಪರೀಕ್ಷೆಯ ದಿನದಂದು ಈ ಕೆಳಗಿನ ವಸ್ತುಗಳನ್ನು ಮಾತ್ರ ತರಲು ಅನುಮತಿಸಲಾಗಿದೆ ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಖಡ್ಡಾಯವಾಗಿ ತರುವುದು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಕಡ್ಡಾಯ. ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.ಮೇಲಿನ ನಿಯಮಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕಠಿಣ ಕ್ರಮವನ್ನು ಜರುಗಿಸಲಾಗುವುದು

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...