alex Certify BIG NEWS: ನಾಳೆ ರಾಜ್ಯ ಸರ್ಕಾರದ ಕೊನೆಯ ಸಚಿವ ಸಂಪುಟ ಸಭೆ; ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆ ರಾಜ್ಯ ಸರ್ಕಾರದ ಕೊನೆಯ ಸಚಿವ ಸಂಪುಟ ಸಭೆ; ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಸಚಿವ ಸಂಪುಟ ಸಭೆ ನಾಳೆ ಸಂಜೆ 4 ಗಂಟೆಗೆ ನಡೆಯುತ್ತಿದ್ದು, ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.

ಈ ಮೊದಲು ಸಚಿವ ಸಂಪುಟ ಸಭೆಯನ್ನು ಮಾರ್ಚ್ 23 ರ ಇಂದು ಬೆಳಿಗ್ಗೆ ನಡೆಸಲು ತೀರ್ಮಾನಿಸಲಾಗಿತ್ತಾದರೂ ಯುಗಾದಿ ಆಚರಣೆಗಾಗಿ ಬಹುತೇಕ ಎಲ್ಲ ಸಚಿವರು ತಮ್ಮ ತಮ್ಮ ಊರುಗಳಿಗೆ ತೆರಳಿರುವ ಕಾರಣ ಮಾರ್ಚ್ 24ಕ್ಕೆ ಮುಂದೂಡಿಕೆ ಮಾಡಲಾಗಿತ್ತು.

ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದ ಕುರಿತಂತೆ ಅದಕ್ಕೆ ಪೂರಕವಾಗಿ ಒಂದು ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...