ನಾಳೆ ಕಾಂಗ್ರೆಸ್ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆದಿದೆ.
ಇದಕ್ಕೂ ಮುನ್ನ ಸಚಿವರುಗಳನ್ನು ಆಯ್ಕೆ ಮಾಡುವ ಸಲುವಾಗಿ ನಿಯೋಜಿತ ಸಿಎಂ ಹಾಗೂ ಡಿಸಿಎಂ ವಿಶೇಷ ವಿಮಾನದಲ್ಲಿ ಇಂದು ದೆಹಲಿಗೆ ತೆರಳಿದ್ದು, ಅದಕ್ಕೂ ಮುನ್ನ ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿರುವ ಸಚಿವ ಸ್ಥಾನ ಆಕಾಂಕ್ಷಿಗಳು ಒತ್ತಡ ತಂತ್ರ ಆರಂಭಿಸಿದ್ದಾರೆ.
ಅಜಯ್ ಸಿಂಗ್, ನಾಗೇಂದ್ರ, ಎಸ್ ಎಸ್ ಮಲ್ಲಿಕಾರ್ಜುನ್, ಶಿವರಾಜ್ ತಂಗಡಗಿ, ಕೆ ಎನ್ ರಾಜಣ್ಣ ಸೇರಿದಂತೆ ಹಲವು ಶಾಸಕರುಗಳು ದೆಹಲಿಯ ರಾಜಾಜಿ ಮಾರ್ಗ್ ನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿ ಸಚಿವ ಸ್ಥಾನಕ್ಕಾಗಿ ಲಾಬಿ ಆರಂಭಿಸಿದ್ದಾರೆ.
ನವದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಂದು ರಾತ್ರಿ ಒಳಗಾಗಿ ವಾಪಸ್ ಬರಲಿದ್ದು, ಅದಕ್ಕೂ ಮುನ್ನ ನೂತನ ಸಚಿವರ ಪಟ್ಟಿಗೆ ಹೈಕಮಾಂಡ್ ಅನುಮತಿ ಪಡೆಯಲಿದ್ದಾರೆ. ಹೀಗಾಗಿ ಸಚಿವ ಸ್ಥಾನ ಆಕಾಂಕ್ಷಿಗಳು ಒತ್ತಡ ತಂತ್ರ ಆರಂಭಿಸಿದ್ದಾರೆ.