ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಾಯಕರ ವಾಕ್ಸಮರಕ್ಕೆ ಕಾರಣವಾಗಿದೆ.
ವಿಧಾನಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷದವರು ಏನೇ ಹೇಳಿದರೂ ಮತ್ತೆ ಅಧಿಕಾರಕ್ಕೆ ಬರಲ್ಲ, ಕಾಂಗ್ರೆಸ್ ನಾಯಕರು ಭ್ರಮೆಯಲ್ಲಿದ್ದಾರೆ ಎಂದು ಗುಡುಗಿದರು.
BIG NEWS: ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಆಸ್ಪತ್ರೆಗೆ ದಾಖಲು
ರಾಜ್ಯದಲ್ಲಿ 135ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಅಧಿವೇಶನ ಮುಗಿಯುತ್ತಿದ್ದಂತೆಯೇ ರಾಜ್ಯಾದ್ಯಂತ ಪ್ರವಾಸ ಮಾಡಿ ಕೇಂದ್ರ, ರಾಜ್ಯದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುತ್ತೇವೆ. ಸಿದ್ದರಾಮಯ್ಯನವರೇ ನೀವು ಮತ್ತೆ ಸಿಎಂ ಆಗಲು ಸಾಧ್ಯವಿಲ್ಲ, ಕಾಂಗ್ರೆಸ್ ವಿಪಕ್ಷದಲ್ಲಿಯೇ ಶಾಶ್ವತವಾಗಿ ಕೂರಬೇಕಾಗುತ್ತದೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶ ರಾಜ್ಯದಲ್ಲಿ ಮರುಕಳಿಸಲಿದೆ ಎಂದು ಟಾಂಗ್ ನೀಡಿದರು.
ಇದೇ ವೇಳೆ ಬಜೆಟ್ ವಿಚಾರವಾಗಿಯೂ ಮಾತನಾಡಿದ ಬಿ ಎಸ್ ವೈ, ಸಿಎಂ, ಡಿಸಿಎಂ ಆಗಿ 8 ಬಜೆಟ್ ಮಂಡಿಸಿದ್ದೇನೆ. ಕಳೆದ 2 ವರ್ಷಗಳಲ್ಲಿ ಕೊರೊನಾದಿಂದ ಲಾಕ್ ಡೌನ್ ಆಯಿತು. ಇದರಿಂದ ಆರ್ಥಿಕ ಕುಸಿತವುಂಟಾಯಿತು. ಇಂತಹ ಸಂದರ್ಭದಲ್ಲಿ ರಾಜಸ್ವ ಕೊರತೆ ಸಹಜ. ಕೊರತೆಯಿಂದ ಸಮನ್ವಯತೆ ಕಾಯ್ದುಕೊಳ್ಳುವುದು ಕಷ್ಟ. ಇದರಿಂದ ವಿತ್ತೀಯ ಕೊರತೆಯಾಗಿದೆ. ಸಿದ್ದರಾಮಯ್ಯ ಕಾಲದಲ್ಲಿಯೂ ವಿತ್ತೀಯ ಕೊರತೆಯುಂಟಾಗಿತ್ತು ಎಂದು ಹೇಳಿದರು.