ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗುವ ಮೂಲಕ ಅಭಿಮಾನಿಗಳ ಜತೆ ಸಂಪರ್ಕದಲ್ಲಿದ್ದ ನಟಿ ರಮ್ಯಾ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿ ಖುಷಿ ಹಂಚಿಕೊಂಡಿದ್ದರು. ಇಂದು ಇದ್ದಕ್ಕಿದ್ದಂತೆ ಬೆಂಗಳೂರಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷವಾಗುವ ಮೂಲಕ ರಮ್ಯಾ ಅಚ್ಚರಿ ಮೂಡಿಸಿದ್ದಾರೆ.
ಅಷ್ಟಕ್ಕೂ ರಮ್ಯಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದೇಕೆ? ಯಾರ ವಿರುದ್ಧ ದೂರು ದಾಖಲಿಸಿದ್ದಾರೆ? ಎಂಬುದು ಎಲ್ಲರ ಪ್ರಶ್ನೆ. ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತಿಯೋರ್ವ ನಿಂದಿಸಿದ ಹಿನ್ನೆಲೆಯಲ್ಲಿ ರಮ್ಯಾ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇನ್ ಸ್ಟಾಗ್ರಾಂ ನಲ್ಲಿ ರಮ್ಯಾ ಅವರಿಗೆ ವ್ಯಕ್ತಿಯೊಬ್ಬ ಅನುಚಿತ ಪದ ಬಳಸಿ ನಿಂದಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಹಲಸೂರು ಗೇಟ್ ಪೊಲೀಸ್ ಠಾಣೆ ಬಳಿಯಿರುವ ಕೇಂದ್ರ ವಿಭಾಗ ಸಿಇಎನ್ ಠಾಣೆಗೆ ಆಗಮಿಸಿದ ರಮ್ಯಾ, ವ್ಯಕ್ತಿ ವಿರುದ್ಧ ದೂರು ದಾಖಲಿಸಿದ್ದಾರೆ.