ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆನ್ನಲ್ಲೇ ಇದೀಗ ಬಿಜೆಪಿ ಕೂಡ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಏಕವಚನದಲ್ಲಿ ಮಾತನಾಡುವ ಮುನ್ನ ಎಚ್ಚರದಿಂದ ಮಾತನಾಡಿ ಎಂದು ಕಿಡಿಕಾರಿದೆ.
ಜನರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆಯಾದ ಪ್ರಧಾನ ಸೇವಕ ಪ್ರಧಾನಿ ಹುದ್ದೆಯಲ್ಲಿರುವ ಮೋದಿಯವರಿಗೂ ಕೀಳು ಮಟ್ಟದಲ್ಲಿ ಮಾತನಾಡಿ ನಿಮ್ಮ ಕೀಳು ಸಂಸ್ಕಾರ ಅನಾವರಣ ಮಾಡಿಕೊಂಡಿದ್ದೀರಿ. ಸರ್ಕಾರಿ ಬಂಗಲೆಯಲ್ಲಿಯೇ ಉಳಿಯಬೇಕು ಎಂಬ ಹಟಕ್ಕೆ ಪ್ರತಿಪಕ್ಷ ಸ್ಥಾನ ಪಟ್ಟು ಹಿಡಿದು ಉಳಿಸಿಕೊಂಡ ನಿಮ್ಮಂತವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಮಾತೆತ್ತಿದರೆ ನಾನು ಹಳ್ಳಿಯವನು, ನಾನು ಮಾತನಾಡುವ ಶೈಲಿ ಹೀಗೆ ಎನ್ನುವ ಸಿದ್ದರಾಮಯ್ಯನವರೇ ನಿಮಗೆ ಗ್ರಾಮೀಣ ಸಂಸ್ಕೃತಿ ಅರಿವೇ ಇಲ್ಲ ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ಚಾಟಿ ಬೀಸಿದೆ.
ಕಾಡಿನಲ್ಲಿದ್ದ ನಿಗೂಢ ಟೇಬಲ್ ಕಂಡು ಛಾಯಾಗ್ರಾಹಕನಿಗೆ ಅಚ್ಚರಿ…!
ಅನ್ಯರನ್ನು ಪ್ರೀತಿ, ಬಹುವಚನ, ಆದರದಿಂದ ಮಾತನಾಡುವುದು ಗ್ರಾಮೀಣ ಸಂಸ್ಕೃತಿ. ಆದರೆ ನಿಮ್ಮಂಥ ’ಮನೆಮುರುಕರು’ ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಎಂದುಕೊಂಡಿದ್ದಾರೆ ’ಬುರುಡೆ ರಾಮಯ್ಯ’ ಎಂದು ಗುಡುಗಿದೆ.
ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದಾರೆಂಬ ಕಾರಣಕ್ಕೆ ತಾನು ಪ್ರಧಾನಿಯಾಗಬೇಕೆಂದು ಓರ್ವ ’ಹೆಬ್ಬಟ್ಟು’ ಗಿರಾಕಿ ಕನಸು ಕಾಣುತ್ತಿದ್ದಾನೆ. ಸಿದ್ದರಾಮಯ್ಯನವರೇ ಆತನ ಯೋಗ್ಯತೆ, ಅರ್ಹತೆ ಏನು? ಎಂದು ವಿಚಾರಿಸಿ. ನಿಮ್ಮ ಶಾಶ್ವತ ಪ್ರಧಾನಿ ಅಭ್ಯರ್ಥಿಯ ಬಗ್ಗೆಯೂ ಹೀಗೇ ಮಾತನಾಡುತ್ತೀರಾ? ಎಂದು ಪ್ರಶ್ನಿಸಿದೆ.