alex Certify BIG NEWS: ನಿಮ್ಮ ನಿಮ್ಮ ಚಡ್ಡಿ ಉದುರಿಸಿಕೊಳ್ಳಿ; ಆದ್ರೆ ರಾಜ್ಯದ ಜನತೆಯ ಚಡ್ಡಿ ಉದುರಿಸಬೇಡಿ; ಬಿಜೆಪಿ-ಕಾಂಗ್ರೆಸ್ ನಾಯಕರ ವಿರುದ್ಧ HDK ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಿಮ್ಮ ನಿಮ್ಮ ಚಡ್ಡಿ ಉದುರಿಸಿಕೊಳ್ಳಿ; ಆದ್ರೆ ರಾಜ್ಯದ ಜನತೆಯ ಚಡ್ಡಿ ಉದುರಿಸಬೇಡಿ; ಬಿಜೆಪಿ-ಕಾಂಗ್ರೆಸ್ ನಾಯಕರ ವಿರುದ್ಧ HDK ಆಕ್ರೋಶ

ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿದ್ದ ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನ ಹೇಳಿಕೆಯಿಂದ ಆರಂಭವಾಗಿರುವ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ವಾಕ್ಸಮರ ತಾರಕಕೇರಿದ್ದು, ಈ ಮಧ್ಯೆ ಎರಡೂ ಪಕ್ಷಗಳ ನಾಯಕರ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಹೇಳಿಕೆಗಳು ವಿಪರೀತಕ್ಕೆ ತಲುಪುತ್ತಿವೆ. ದಯವಿಟ್ಟು ರಾಜ್ಯದ ಜನತೆ ಗೌರಯುತವಾಗಿ ಬದುಕುವ ವಾತಾವರಣ ನಿರ್ಮಾಣ ಮಾಡಬೇಕು ಎಂದು ಹೇಳಿದ್ದಾರೆ.

ಜೀವನ ನಿರ್ವಹಣೆಗೆ ತರಕಾರಿ ಮಾರುವ ಈ ವೃದ್ಧೆ ವಯಸ್ಸೆಷ್ಟು ಗೊತ್ತಾ….?

ಕಾಂಗ್ರೆಸ್ ನಾಯಕರು ಚಡ್ಡಿ ಸುಡುವ ಹೇಳಿಕೆ ಕೊಡುತ್ತಿದ್ದಾರೆ. ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ಚಡ್ಡಿ ಉದುರಿಸಿದ್ದೇವೆ ಅಂತಿದ್ದಾರೆ. ಇದು ಎಲ್ಲಿಯವರೆಗೆ ಹೋಗುತ್ತಿದೆ…ನಿಮ್ಮ ನಿಮ್ಮ ಚಡ್ಡಿ ಉದುರಿಸಿಕೊಳ್ಳಿ ಆದರೆ ದಯವಿಟ್ಟು ರಾಜ್ಯದ ಜನತೆಯ ಚಡ್ಡಿ ಉದುರಿಸಬೇಡಿ. ಜನರು ಗೌರವದಿಂದ ಬದುಕುವ ವಾತಾವರಣ ಕಲ್ಪಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ಸಚಿವ ನಾಗೇಶ್ ನಾವೆಲ್ಲರೂ ಆರ್.ಎಸ್.ಎಸ್ ನವರು ಎನ್ನುತ್ತಿದ್ದಾರೆ. ಆರ್.ಎಸ್.ಎಸ್ ರಾಷ್ಟ್ರ ಭಕ್ತಿ, ಹಿಂಧುತ್ವದ ಹೆಸರಲ್ಲಿ ಹೈಜಾಕ್ ಮಾಡುತ್ತಿದೆ. ರಾಜ್ಯದ ಜನತೆಗೆ ಅವಮಾನ ಆಗದಂತೆ ಮೊದಲು ನಡೆದುಕೊಳ್ಳಿ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...