ಬೆಂಗಳೂರು: ರಾಜ್ಯದ ಮೂರು ನೀರಾವರಿ ಯೋಜನೆಗಳು ಹಾಗೆಯೇ ನಿಂತಿದೆ. ಸುಮ್ಮನೇ ಕೂತರೆ ಆಗಲ್ಲ, ನೀರಾವರಿ ಯೋಜನೆ ಜಾರಿಗಾಗಿ ಜೆಡಿಎಸ್ ಪಾದಯಾತ್ರೆ ಆರಂಭಿಸಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ. ದೇವೇಗೌಡ, ಕೃಷ್ಣನದಿ ನೀರು ಹಂಚಿಕೆ, ಮಹದಾಯಿ, ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಅಧಿವೇಶನ ಮುಗಿಯುತ್ತಿದಂತೆಯೇ ಜೆಡಿಎಸ್ ಆಲಮಟ್ಟಿಯಿಂದ ಪಾದಯಾತ್ರೆ ಆರಂಭಿಸಲಿದೆ. ಪಾದಯಾತ್ರೆಯಲ್ಲಿ ಒಂದು ದಿನ ನಾನೂ ಭಾಗಿಯಾಗಲಿದ್ದೇನೆ. ಅಧಿವೇಶನ ಮುಗಿಯುತ್ತಿದ್ದಂತೆಯೇ ಪಾದಯಾತ್ರೆ ದಿನಾಂಕ ಪ್ರಕಟಿಸಲಾಗುವುದು ಎಂದು ಹೇಳಿದರು.
ನಾಳೆಯಿಂದ ಶಾಲಾ, ಕಾಲೇಜಿಗೆ ಹೊರಟ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ನಮಗೆ ಯಾರ ಬಗ್ಗೆಯೂ ದ್ವೇಷವಿಲ್ಲ, ಜೆಡಿಎಸ್ ಪ್ರಾದೇಶಿಕ ಪಕ್ಷವಾಗಿ ಸಮಸ್ಯೆಗಳನ್ನು ಬಗೆಹರಿಸಬೇಕು. ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ, ಮುಂದಿನ ಚುನಾವಣೆಯಲ್ಲಿ ಹೆಸರಿಗೂ ಇರೋದಿಲ್ಲ ಎಂದು ಹೇಳುತ್ತಾರೆ. ಹಳೆ ಮೈಸೂರು ಭಾಗದಲ್ಲಿ ಮಾತ್ರ ಜೆಡಿಎಸ್ ಇದೆ ಅನ್ನೋ ಭಾವನೆ ಇದೆ. ಹೋರಾಟ ಮಾಡಿ ಅಸ್ತಿತ್ವ ಉಳಿಸಿಕೊಂಡು ಅಧಿಕಾರಕ್ಕೆ ಬರುತ್ತೇವೆ. ಯಾರನ್ನು ಯಾರೂ ಕಟ್ಟಿಹಾಕಲು ಸಾಧ್ಯವಿಲ್ಲ ಎಂದು ಹೇಳಿದರು.