ಚೆನ್ನೈ: ಕಾಲಿವುಡ್ ನ ಖ್ಯಾತ ನಿರ್ಮಾಪಕ ಅನ್ಬು ಚೆಳಿಯನ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಇದರ ಬೆನ್ನಲ್ಲೇ ತಮಿಳು ಚಿತ್ರರಂಗದ ಹಲವು ನಟ, ನಟಿಯರು, ಸೆಲೆಬ್ರಿಟಿಗಳಿಗೆ ನಡುಕ ಶುರುವಾಗಿದೆ.
ನಿರ್ಮಾಪಕ, ಫೈನಾನ್ಶಿಯರ್ ಅನ್ಬು ಚೆಳಿಯನ್ ಅವರ ಚೆನ್ನೈನಲ್ಲಿರುವ ಮನೆ, ಕಚೇರಿ ಮೇಲೆ ಇಂದು ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಚೆನ್ನೈ, ಮಧುರೈ ಸೇರಿದಂತೆ 50 ಕಡೆಗಳಲ್ಲಿ ಅಧಿಕಾರಿಗಳು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಅನ್ಬು ಚೆಳಿಯನ್ ವಿರುದ್ಧ ತೆರಿಗೆ ವಂಚನೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.