alex Certify BIG NEWS: ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಇದೀಗ ಬೆಂಗಳೂರಿನ ಸುಂಕದ ಕಟ್ಟೆ ಬಳಿಯ ಚೈತ್ರಾ ಬಾರ್ ಬಳಿ ಬಂಧಿಸಲಾಗಿದೆ. ಬಂಧಿತರನ್ನು ದರ್ಶನ್, ಸಂಜು ಎಂದು ಗುರುತಿಸಲಾಗಿದೆ.

ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 15 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಪ್ರಕರಣದ 16 ಹಾಗೂ 17ನೇ ಆರೋಪಿಗಳಾದ ಇಬ್ಬರೂ ತಲೆಮರೆಸಿಕೊಂಡಿದ್ದರು. ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಜಯನಗರ ಪೊಲೀಸರ ವಶಕ್ಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...