alex Certify Big News: ನಿವಾಸದ ಎದುರೇ ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big News: ನಿವಾಸದ ಎದುರೇ ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ

ಬಿಜೆಪಿ ಮುಖಂಡರೊಬ್ಬರನ್ನು ಅವರ ನಿವಾಸದ ಎದುರೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ಕಳೆದ ರಾತ್ರಿ 8 ಗಂಟೆ ಸುಮಾರಿಗೆ ಮಯೂರ್‌ ವಿಹಾರ್‌ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ದೆಹಲಿ ಜಿಲ್ಲಾ ಬಿಜೆಪಿ ಮುಖಂಡ ಜೀತು ಚೌಧರಿ ಅವರನ್ನು ಅಪರಿಚಿತ ಬಂದೂಕುಧಾರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.

ಜೀತು ಚೌಧರಿ ತಮ್ಮ ನಿವಾಸದ ಮುಂದೆ ಇದ್ದ ಸಂದರ್ಭದಲ್ಲಿಯೇ ಅವರ ಮೇಲೆ ಅಪರಿಚಿತ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಮೆಟ್ರೋ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

ಗುಂಡಿನ ದಾಳಿ ನಡೆದ ಸ್ಥಳದಲ್ಲಿ ಖಾಲಿ ಕಾಟ್ರಿಡ್ಜ್‌ ಗಳು ಸಿಕ್ಕಿದ್ದು, ಅಪರಿಚಿತ ಹಂತಕನ ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ಹಳೆ ವೈಷಮ್ಯ ಕಾರಣವೇ ಅಥವಾ ಉದ್ದೇಶಪೂರ್ವಕವಾಗಿಯೇ ಈ ಹತ್ಯೆ ಮಾಡಲಾಗಿದೆಯೇ ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿನ ಸಿಸಿ ಟಿವಿ ದೃಶ್ಯಾವಳಿಗಳನ್ನೂ ಪೊಲೀಸರು ಪಡೆದುಕೊಂಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...