ಚಿಕ್ಕಬಳ್ಳಾಪುರ: ನಿವೃತ್ತ ಯೋಧರನ್ನು ಲೋಕಾಯುಕ್ತಕ್ಕೆ ನೇಮಿಸಿಕೊಳ್ಳಲು ಚಿಂತನೆ ನಡೆದಿದೆ ಎಂದು ಉಪ ಲೋಕಾಯುಕ್ತ ನ್ಯಾ.ಎನ್.ಫಣೀಂದ್ರ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಪ್ರಾಮಾಣಿಕ ನಿವೃತ್ತ ಅಧಿಕಾರಿಗಳನ್ನು ನೇಮಿಸಿಕೊಳ್ಳುವ ಯೋಜನೆ ಇದೆ. ಲೋಕಾಯುಕ್ತರು ಇಂತಹ ಪ್ರಸ್ತಾವನೆ ಬಗ್ಗೆ ಯೋಚನೆ ಮಾಡಿದ್ದಾರೆ ಎಂದರು.
ಸರ್ಕಾರದ ಅನುಮತಿ ಪಡೆದು ನೇಮಿಸಿಕೊಳ್ಳಬೇಕು ಎಂಬ ಯೋಚನೆ ಇದೆ. ಸಂಸ್ಥೆ ಮೇಲೆ ಇರುವ ನಂಬಿಕೆಯನ್ನು ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.