ಬೆಂಗಳೂರು: ಟೋಕಿಯೋದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ನ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾಗೆ ಅಭಿನಂದನೆ ಸಲ್ಲಿಸಿರುವ ಕ್ರೀಡಾ ಸಚಿವ ನಾರಾಯಣಗೌಡ, ನೀರಜ್ ಕೋಚ್ ಶಿರಸಿಯ ಕಾಶಿನಾಥ್ ಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.
ನೀರಜ್ ಚಿನ್ನದ ಸಾಧನೆ ಹಿಂದೆ ಕನ್ನಡಿಗ ತರಬೇತುದಾರ ಕಾಶಿನಾಥ್ ನಾಯ್ಕ್ ಪಾತ್ರವಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಾಶಿನಾಥ್ ನಾಯ್ಕ್ 2010ರ ಕಾಮನ್ವೆಲ್ತ್ ನಲ್ಲಿ ಈಟಿ ಎಸೆತದಲ್ಲಿ ಕಂಚಿನ ಪದಕ ವಿಜೇತರಾಗಿದ್ದರು.
ಕೊನೆಕ್ಷಣದಲ್ಲಿ ಮದುವೆ ರದ್ದುಮಾಡಿ ವರನಿಗೆ ಶಾಕ್ ಕೊಟ್ಟ ವಧು…!
ಅತ್ಯುತ್ತಮ ಕ್ರೀಡಾ ಸಾಧಕ ಕಾಶಿನಾಥ್ ಗರಡಿಯಲ್ಲಿ ಪಳಗಿದ ನೀರಜ್ ಸ್ವರ್ಣ ಪದಕ ಗಳಿಸಿ ದೇಶದ ಗೌರವವನ್ನು ಹೆಚ್ಚಿಸಿದ್ದಾರೆ. ಇಂತಹ ಸಾಧನೆಗೆ ಬೆನ್ನೆಲುಬಾದ ಕನ್ನಡಿಗ ಕಾಶಿನಾಥ್ ನಾಯ್ಕ್ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 10 ಲಕ್ಷ ನಗದು ಬಹುಮಾನ ಘೋಷಿಸಲಾಗಿದೆ ಎಂದು ಸಚಿವ ನಾರಾಯಣಗೌಡ ತಿಳಿಸಿದ್ದಾರೆ.