ಬೆಂಗಳೂರು: ನೂತನ ಶಾಸಕರಿಗೆ ಇಂದಿನಿಂದ ಮೂರು ದಿನಗಳ ಕಾಲ ತರಬೇತಿ ಶಿಬಿರ ಆರಂಭವಾಗಲಿದೆ.
ಹೊಸದಾಗಿ ವಿಧಾನಸಭೆ ಪ್ರವೇಶಿಸುವ ಶಾಸಕರಿಗೆ ಅಗತ್ಯ ತರಬೇತಿ ನೀಡುವುದು ವಾಡಿಕೆ. ಅದರಂತೆ ರಾಜ್ಯದ 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಸದಸ್ಯರಿಗೆ ಬೆಂಗಳೂರಿನ ನೆಲಮಂಗಲದಲ್ಲಿರುವ ಧರ್ಮಸ್ಥಳ ಕ್ಷೇಮವನದಲ್ಲಿ ಶಾಸಕರಿಗೆ ತರಬೇತಿ ಶಿಬಿರ ಆರಂಭವಾಗಲಿದೆ.
ಇಂದಿನಿಂದ ಜೂನ್ 28ರವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ನಡೆಯಲಿದ್ದು, ಇಂದು ಸಿಎಂ ಸಿದ್ದರಾಮಯ್ಯ ತರಬೇತಿ ಶಿಬಿರ ಉದ್ಘಾಟಿಸಲಿದ್ದಾರೆ.