alex Certify BIG NEWS: ನೂತನ ಶಾಸಕರಿಗೆ ಇಂದಿನಿಂದ 3 ದಿನ ತರಬೇತಿ ಶಿಬಿರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೂತನ ಶಾಸಕರಿಗೆ ಇಂದಿನಿಂದ 3 ದಿನ ತರಬೇತಿ ಶಿಬಿರ

ಬೆಂಗಳೂರು: ನೂತನ ಶಾಸಕರಿಗೆ ಇಂದಿನಿಂದ ಮೂರು ದಿನಗಳ ಕಾಲ ತರಬೇತಿ ಶಿಬಿರ ಆರಂಭವಾಗಲಿದೆ.

ಹೊಸದಾಗಿ ವಿಧಾನಸಭೆ ಪ್ರವೇಶಿಸುವ ಶಾಸಕರಿಗೆ ಅಗತ್ಯ ತರಬೇತಿ ನೀಡುವುದು ವಾಡಿಕೆ. ಅದರಂತೆ ರಾಜ್ಯದ 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಸದಸ್ಯರಿಗೆ ಬೆಂಗಳೂರಿನ ನೆಲಮಂಗಲದಲ್ಲಿರುವ ಧರ್ಮಸ್ಥಳ ಕ್ಷೇಮವನದಲ್ಲಿ ಶಾಸಕರಿಗೆ ತರಬೇತಿ ಶಿಬಿರ ಆರಂಭವಾಗಲಿದೆ.

ಇಂದಿನಿಂದ ಜೂನ್ 28ರವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ನಡೆಯಲಿದ್ದು, ಇಂದು ಸಿಎಂ ಸಿದ್ದರಾಮಯ್ಯ ತರಬೇತಿ ಶಿಬಿರ ಉದ್ಘಾಟಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...