ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆಗೆ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಇಬ್ಬರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.
ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ವಿಚಾರವಾಗಿ ಧರ್ಮೇಂದ್ರ ಪ್ರಧಾನ್ ಹಾಗೂ ಕಿಶನ್ ರೆಡ್ಡಿ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದ್ದು, ರಾಜ್ಯದ ಹೊಸ ಸಿಎಂ ಆಯ್ಕೆ ನಿಟ್ಟಿನಲ್ಲಿ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಟೀಂ ಇಂಡಿಯಾ ರೆಟ್ರೋ ಜೆರ್ಸಿಯಲ್ಲಿ ಧೋನಿ ಮಿಂಚಿಂಗ್
ಬೆಂಗಳೂರಿಗೆ ತೆರಳುವ ಮುನ್ನ ದೆಹಲಿಯಲ್ಲಿ ಮಾತನಾಡಿದ ಕಿಶನ್ ರೆಡ್ದಿ, ನೂತನ ಸಿಎಂ ಆಯ್ಕೆ ಸಂಬಂಧ ಕರ್ನಾಟಕಕ್ಕೆ ತೆರಳುತ್ತಿದ್ದು, ಶಾಸಕಾಂಗ ಪಕ್ಷದ ಸಭೆ ನಡೆಸಿ, ಸಭೆಯಲ್ಲಿ ಹೊಸ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದರು.