alex Certify BIG NEWS: ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ತೀವ್ರಗೊಂಡ ಪ್ರತಿಭಟನೆ; ರಾಂಚಿಯಲ್ಲಿ ಹಿಂಸಾಚಾರಕ್ಕೆ ಇಬ್ಬರು ಬಲಿ; ಯುಪಿಯಲ್ಲಿ 150 ಜನ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ತೀವ್ರಗೊಂಡ ಪ್ರತಿಭಟನೆ; ರಾಂಚಿಯಲ್ಲಿ ಹಿಂಸಾಚಾರಕ್ಕೆ ಇಬ್ಬರು ಬಲಿ; ಯುಪಿಯಲ್ಲಿ 150 ಜನ ಅರೆಸ್ಟ್

ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿದ್ದು, ಜಾರ್ಖಂಡ್ ನ ರಾಂಚಿಯಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮುಸ್ಲಿಂ ಸಮುದಾಯದ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿದ್ದು, ಪ್ರತಿಭಟನೆ ವೇಳೆ ಕಲ್ಲುತೂರಾಟ, ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ.

ಈ ನಡುವೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿಯೂ ಪ್ರತಿಭಟನೆ ತೀವ್ರಗೊಂಡಿದ್ದು, ಪೊಲೀಸರು ಈವರೆಗೆ 150 ಜನರನ್ನು ಬಂಧಿಸಿದ್ದಾರೆ. 5000 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...