alex Certify BIG NEWS: ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ರಾಜ್ಯದಲ್ಲಿ ತೀವ್ರಗೊಂಡ SDPI ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ರಾಜ್ಯದಲ್ಲಿ ತೀವ್ರಗೊಂಡ SDPI ಪ್ರತಿಭಟನೆ

ಬೆಂಗಳೂರು; ಪ್ರವಾದಿ ಪೈಗಂಬರ್ ಕುರಿತು ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ನೀಡಿದ್ದ ವಿವಾದಾತ್ಮಕ ಹೇಳಿಕೆ ಖಂಡಿಸಿ ಮುಂಬೈ, ಉತ್ತರಪ್ರದೇಶ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಮುಸ್ಲಿಂ ಮುಖಂಡರು ಪ್ರತಿಭಟನೆ ತೀವ್ರಗೊಳಿಸಿದ್ದು, ರಾಜ್ಯದಲ್ಲಿಯೂ ಧರಣಿ, ಪ್ರತಿಭಟನೆಗಳು ಭುಗಿಲೆದ್ದಿವೆ.

ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರನ್ನು ಬಂಧಿಸಿ, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮೈಸೂರು, ಯಾದಗಿರಿ, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಸ್ ಡಿ ಪಿ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮೈಸೂರಿನ ಮಿಲಾದ್ ಪಾರ್ಕ್ ಬಳಿ ಎಸ್ ಡಿ ಪಿ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರೆ, ಯಾದಗಿರಿಯಲ್ಲಿ ತಹಶೀಲ್ದಾರ್ ಕಚೇರಿ ಬಳಿ ಧರಣಿ ನಡೆಸಿದ್ದಾರೆ. ಗಡಿ ಜಿಲ್ಲೆ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತಿಭಟನಾ ನಿರತ ಮುಸ್ಲಿಂ ಕಾರ್ಯಕರ್ತರು ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು ಕೇಬಲ್ ತಂತಿಗೆ ನೇತುಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಬಂಧನಕ್ಕೆ ಒತ್ತಾಯಿಸಿ ಡಿಸಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...