ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಒಮಿಕ್ರಾನ್ ಹೆಚ್ಚಳ, ಕೋವಿಡ್ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕರ್ಫ್ಯೂ ಅನಿವಾರ್ಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಂದಿನಿಂದ 10 ದಿನಗಳವರೆಗೆ ನೈಟ್ ಕರ್ಫ್ಯೂ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಜನರು ಸಹಕಾರ ನೀಡಬೇಕು. ಹತ್ತು ದಿನಗಳ ಕಾಲ ಪರಿಸ್ಥಿತಿ ಗಮನಿಸಲಾಗುವುದು. ನಂತರ ತಜ್ಞರ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಟ್ಟಡದ ಆರನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟ 9ನೇ ತರಗತಿ ವಿದ್ಯಾರ್ಥಿ..!
ನೈಟ್ ಕರ್ಫ್ಯೂ ವಿರೋಧಿಸುವುದು ಸರಿಯಲ್ಲ. ಸಾಧಕ-ಬಾಧಕ ನೋಡಿಕೊಂಡೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಜನರ ಆರೋಗ್ಯದ ಹಿತದೃಷ್ಟಿಯೂ ಮುಖ್ಯವಾಗುತ್ತದೆ. ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದರು.
15-18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆಗೆ ಕೇಂದ್ರ ಸೂಚನೆ ನೀಡಿದೆ. ನಮ್ಮಲ್ಲಿ ಕೋವ್ಯಾಕ್ಸಿನ್ ಅಗತ್ಯದಷ್ಟು ಸಂಗ್ರಹ ಇಲ್ಲ. ಕೋವ್ಯಾಕ್ಸಿನ್ ಗಾಗಿ ಕೇಂದ್ರದ ಮುಂದೆ ಬೇಡಿಕೆ ಇಡಲಾಗುವುದು. ಜನವರಿ 3 ರಿಂದ ಮಕ್ಕಳಿಗೆ ಲಸಿಕೆ ನೀಡಲಾಗುವುದು ಎಂದರು.