ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಕಳೆದ ಎರಡು ವರ್ಷಗಳಿಂದ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಕೊನೆಗೂ ಸಿಹಿ ಸುದ್ದಿ ನೀಡಿದೆ. ಪಂಚಮಸಾಲಿ ಹಾಗೂ ಒಕ್ಕಲಿಗ ಎರಡೂ ಸಮುದಾಯಕ್ಕೂ ಮೀಸಲಾತಿ ಘೋಷಣೆ ಮಾಡಿದೆ.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಮಾಧುಸ್ವಾಮಿ, ಪಂಚಮಸಾಲಿ ಸಮಾಜ ಹಾಗೂ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಲು ಸಂಪುಟ ಸಭೆ ಸಮ್ಮತಿ ನೀಡಿದೆ ಎಂದರು.
ಪಂಚಮಸಾಲಿ ಸಮುದಾಯವನ್ನು ಹೊಸದಾಗಿ 2ಎ ಹಾಗೂ 2ಡಿ ಎಂದು ಕ್ಯಾಟಗರಿ ಮಾಡಲಾಗಿದ್ದು, ಒಕ್ಕಲಿಗರಿಗೆ 2ಸಿ ಮೀಸಲಾತಿ ನೀಡಲು ನಿರ್ಧರಿಸಲಾಗಿದೆ. ಆದರೆ ಮೀಸಲಾತಿ ಎಷ್ಟು ಪ್ರಮಾಣ ಎಂಬುದನ್ನು ನಂತರ ಘೋಷಿಸಲಾಗುವುದು ಎಂದರು.