alex Certify BIG NEWS: ಪಂಚಮಸಾಲಿ ಸಮುದಾಯಕ್ಕೆ ಮತ್ತೆ ನಿರಾಸೆ; ಸಂಪುಟ ಸಭೆಯಲ್ಲಿ ಚರ್ಚೆಯಾಗದ ಮೀಸಲಾತಿ ವಿಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಂಚಮಸಾಲಿ ಸಮುದಾಯಕ್ಕೆ ಮತ್ತೆ ನಿರಾಸೆ; ಸಂಪುಟ ಸಭೆಯಲ್ಲಿ ಚರ್ಚೆಯಾಗದ ಮೀಸಲಾತಿ ವಿಚಾರ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿ ಒಂದೆಡೆ ವಿರಾಟ್ ಸಮಾವೇಶ ಆರಂಭವಾಗಿದ್ದರೆ ಮತ್ತೊಂದೆಡೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಮುಕ್ತಾಯವಾಗಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸುವರ್ಣವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಮುಕ್ತಾಯವಾಗಿದೆ. ಸಂಪುಟ ಸಭೆಯಲ್ಲಿ ಪಂಚಮಸಾಲಿ ಮೀಸಲಾತಿ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎನ್ನಲಾಗಿದೆ. ಪಂಚಮಸಾಲಿ 2ಎ ಮೀಸಲಾತಿ ವಿಚರ ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ಮಾಡೋಣ ಎಂದು ಸಿಎಂ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಇಂದಿನ ಸಂಪುಟ ಸಭೆಯಲ್ಲಿ ಪಂಚಮಸಾಲಿ ಮೀಸಲಾತಿ ಘೋಷಿಸುವ ಬಗ್ಗೆ ಅನುಮೋದನೆ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಸಮುದಾಯದ ಮುಖಂಡರಿಗೆ ಮತ್ತೆ ನಿರಾಸೆಯಾಗಿದ್ದು, ಹೋರಾಟ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ಇನ್ನೊಂದೆಡೆ ಸಿಎಂ ಬೊಮ್ಮಾಯಿ ಪಂಚಮಸಾಲಿ ಸಮುದಾಯದವರು ಹೋರಾಟ ಕೈಬಿಡುವಂತೆ ಮುಖಂಡರನ್ನು ಮನವೊಲಿಸುವ ಯತ್ನ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...