ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ಮೀಸಲಾತಿಗಾಗಿ ಒತ್ತಾಯಿಸಿ ನಿನ್ನೆ ರಾತ್ರೋರಾತ್ರಿ ಪಂಚಮಸಾಲಿ ಸಮುದಾಯದ ಮುಖಂಡರು ಸಭೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ಸಂಜೆ 5 ಗಂಟೆಗೆ ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಪಂಚಮಸಾಲಿ ಮೀಸಲಾತಿ ವಿಚಾರದ ಬಗ್ಗೆ ಚರ್ಚೆ ನಡೆಯಲಿದೆ.
ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಪರಿಶೀಲನೆ, ಪಂಚಮಸಾಲಿ ಮೀಸಲಾತಿ ಸಮಿತಿ ರಚನೆ, ಮೀಸಲಾತಿ ಸಾಧಕ ಬಾದಕಗಳ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೇ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಘೋಷಿಸುವುದಾಗಿ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸಂಜೆ ನಡೆಯಲಿರುವ ಸಂಪುಟ ಸಭೆ ಮಹತ್ವ ಪಡೆದುಕೊಂಡಿದೆ.