ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ಆರಂಭಿಸಿರುವ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರಕ್ಕೆ ಮತ್ತೊಂದು ಸಮುದಾಯದ ತಲೆ ನೋವು ಆರಂಭವಾಗಿದೆ.
ನೀಲಿ ಬಣ್ಣದ ಆಧಾರ್ ಕಾರ್ಡ್ ಯಾರಿಗೆ…? ಅರ್ಜಿ ಸಲ್ಲಿಸುವುದು ಹೇಗೆ…? ಇಲ್ಲಿದೆ ಈ ಕುರಿತ ಮಾಹಿತಿ
ವಾಲ್ಮೀಕಿ ಸಮುದಾಯದ ಮುಖಂಡರು ಶೇ.7.5ರಷ್ಟು ಮೀಸಲಾತಿಗಾಗಿ ಆಗ್ರಹಿಸಿ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ವಾಲ್ಮೀಕಿ ಸಮುದಾಯದ ಪ್ರಸನ್ನಾನಂದಪುರಿ ಸ್ವಾಮೀಜಿ, ಅಕ್ಟೋಬರ್ 20ರೊಳಗಾಗಿ ವಾಲ್ಮೀಕಿ ಸಮುದಾಯಕ್ಕೆ ಉದ್ಯೋಗ, ಶಿಕ್ಷಣ ಕ್ಷೇತ್ರದಲ್ಲಿ ಶೇ.7.5ರಷ್ಟು ಮೀಸಲಾತಿ ನೀಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಒಂದೇ ಕುಟುಂಬದ ಐವರು ಆತ್ಮಹತ್ಯೆ ಕೇಸ್; ಮೂವರು ಆರೋಪಿಗಳ ಜಾಮೀನು ಅರ್ಜಿ ವಜಾ
ಹೋರಾಟದ ಅಂತಿಮ ನಿರ್ಧಾರ ಪ್ರಕಟಿಸುವ ಮುನ್ನ ಸಿಎಂ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ನಮ್ಮ ಸಮುದಾಯಕ್ಕೆ ಮೀಸಲಾತಿ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಒಂದು ನಾವಿರಬೇಕು, ಇಲ್ಲಾ ನೀವು… ನಮ್ಮ ಸಹನೆಗೂ ಒಂದು ಮಿತಿಯಿದೆ. ಮಾಡು ಇಲ್ಲವೇ ಮಡಿ ಎಂಬ ನಿಟ್ಟಿನಲ್ಲಿ ಹೋರಾಡುತ್ತೇವೆ. ನಾವು ನೂಕಿದರೆ ನೀವು ಎಲ್ಲಿ ಬೀಳ್ತೀರೋ ಗೊತ್ತಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.