ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಸೋನಿಯಾ ಗಾಂಧಿ ಹೊಣೆಗಾರರು ಎಂದು ದೂರಿ ಪ್ರಯೋಜನವಿಲ್ಲ, ಪಕ್ಷದ ಪ್ರತಿಯೊಬ್ಬರೂ ಸೋಲಿನ ಹೊಣೆ ಹೊರಬೇಕಿದೆ ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ, ಚುನಾವಣಾ ಸೋಲಿಗೆ ಕೇವಲ ಗಾಂಧಿ ಕುಟುಂಬ ಮಾತ್ರ ಕಾರಣ ಎಂದು ಆರೋಪಿಸುವುದು ಸರಿಯಲ್ಲ. ನಾವೆಲ್ಲರೂ ಚುನಾವಣೆ ಫಲಿತಾಂಶದ ಸೋಲಿನ ಜವಾಬ್ದಾರಿ ಹೊತ್ತಿದ್ದೇವೆ. ನಿನ್ನೆ ನಡೆದ ಸಭೆಯಲ್ಲಿ ಕೂಡ ಇದೇ ವಿಚಾರವನ್ನು ಹೇಳಿದ್ದೇವೆ ಎಂದರು.
ಅನಾಯಾಸವಾಗಿ ಸಿಕ್ಕ 20 ಸಾವಿರ ರೂ. ಮರಳಿಸಿ ಪ್ರಾಮಾಣಿಕತೆ ಮೆರೆದ ವಿಮಾನ ನಿಲ್ದಾಣ ಸಿಬ್ಬಂದಿ
ಇಡೀ ಪಕ್ಷದ ಜವಾಬ್ದಾರಿ ಹೊತ್ತಿರುವ ಸೋನಿಯಾ ಗಾಂಧಿಯವರು ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ. ಮುಂದಿನ ಚುನಾವಣೆಯನ್ನು ಎದುರಿಸಲು ನಡೆಸಬೇಕಿರುವ ಸಿದ್ಧತೆ ಬಗ್ಗೆ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕಿದೆ. ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ವಿವರಿಸಿದ್ದಾರೆ.