ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದೆ.
ಬೆಳಗಾವಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಆಯೋಗದ ಮಧ್ಯಂತರ ವರದಿ ಸಲ್ಲಿಸಿದರು.
ವರದಿ ಮುಂದಿಟ್ಟುಕೊಂಡು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಚರ್ಚೆ ನಡೆಸಲಿದ್ದು, 2ಎ ಮೀಸಲಾತಿ ಬೇಡಿಕೆ ವಿಚಾರವಾಗಿ ಮಹತ್ವದ ಸಮಾಲೋಚನೆ ನಡೆಯಲಿದೆ. ಪಂಚಮಸಾಲಿ ಸಮುದಾಯಕ್ಕೆ ಇಂದೇ ಮೀಸಲಾತಿ ಘೋಷಣೆಯಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.