ಬೆಂಗಳೂರು: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ಧಮ್ಕಿ ಆರೋಪ ಕೇಳಿಬಂದಿದೆ. ಮೊಹಮ್ಮದ್ ನಲಪಾಡ್, ಚಿಕ್ಕಮಗಳೂರು ಜಿಲ್ಲಾ ಪ್ರಧಾನಕಾರ್ಯದರ್ಶಿಯೋರ್ವರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾದ ಆಡಿಯೋ ಬಹಿರಂಗವಾಗಿದೆ.
ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಇಲಿಯಾಸ್ ಎಂಬುವವರು ರಾಜ್ಯ ಕಮಿಟಿ ವಿಚಾರವಾಗಿ ಮೊಹಮ್ಮದ್ ನಲಪಾಡ್ ಅವರಿಗೆ ಕರೆ ಮಾಡಿದಾಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಮೊಹಮ್ಮದ್ ನಲಪಾಡ್ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮನೆಗೆ ನುಗ್ಗಿ ಥಳಿಸುವುದಾಗಿ ಧಮ್ಕಿ ಹಾಕಿದ್ದಾರೆ ಎಂದು ಹೇಳಲಾಗಿದೆ. ಸ್ವತಃ ಇಲಿಯಾಸ್ ಎಂಬುವವರು ನಲಪಾಡ್ ವಿರುದ್ಧ ಆರೋಪ ಮಾಡಿ ಆಡಿಯೋ ಬಿಡುಗಡೆ ಮಾಡಿದ್ದಾರೆ.
ನಲಪಾಡ್ ನನಗೆ ಮನೆಗೆ ನುಗ್ಗಿ ಹೊಡೆಯುವುದಾಗಿ ಬೆದರಿಸಿದ್ದಾರೆ. ನಾವು ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಪಕ್ಷಕ್ಕಾಗಿ ಹಗಲು ರಾತ್ರಿ ಶ್ರಮಿಸುತ್ತಿದ್ದೇವೆ. ಆದರೆ ಯೂಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಲಪಾಡ್ ನಮಗೆ ಧಮ್ಕಿ ಹಾಕುತ್ತಿದ್ದಾರೆ. ಕಾನೂನು ಹೋರಾಟ ನಡೆಸುವುದಾಗಿ ಇಲಿಯಾಸ್ ತಿಳಿಸಿದ್ದಾರೆ. ನಲಪಾಡ್ ವಿರುದ್ಧ ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.