alex Certify Big News: ಪಕ್ಷಾಂತರ ಮಾಡಿ ತಪ್ಪು ಮಾಡಿದೆ ಎಂದು ಬಹಿರಂಗವಾಗಿಯೇ ಹೇಳಿದ ಸಚಿವ ಎಂ.ಟಿ.ಬಿ. ನಾಗರಾಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big News: ಪಕ್ಷಾಂತರ ಮಾಡಿ ತಪ್ಪು ಮಾಡಿದೆ ಎಂದು ಬಹಿರಂಗವಾಗಿಯೇ ಹೇಳಿದ ಸಚಿವ ಎಂ.ಟಿ.ಬಿ. ನಾಗರಾಜ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಭಾರತ ಕಾರಣ ಕಾಂಗ್ರೆಸ್ ಜೊತೆ ಜೆಡಿಎಸ್ ಕೈಜೋಡಿಸಿದ್ದು ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಆದರೆ ಆನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಕೆಲ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡಿತ್ತು.

ಇದರಿಂದಾಗಿ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್-ಜೆಡಿಎಸ್ ಶಾಸಕರುಗಳು ಬಳಿಕ ಬಿಜೆಪಿ ಸೇರ್ಪಡೆಗೊಂಡು ಬಹುತೇಕರು ಉಪಚುನಾವಣೆಯಲ್ಲಿ ಮರು ಆಯ್ಕೆಯಾಗಿದ್ದರು. ಒಂದಿಬ್ಬರನ್ನು ಹೊರತುಪಡಿಸಿ ಬಿಜೆಪಿ ಸೇರ್ಪಡೆಗೊಂಡಿದ್ದ ಅನ್ಯ ಪಕ್ಷದ ಶಾಸಕರುಗಳಿಗೆ ಮಂತ್ರಿಗಳನ್ನಾಗಿ ಮಾಡಲಾಗಿತ್ತು.

ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಬಿಜೆಪಿ ಸೇರ್ಪಡೆಗೊಂಡಿದ್ದ ಬಹುತೇಕರಿಗೆ ಆ ಪಕ್ಷದಲ್ಲಿ ಇನ್ನೂ ಹೊಂದಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಮಧ್ಯೆ ಸಚಿವ ಎಂ ಟಿ ಬಿ ನಾಗರಾಜ್ ಅವರು ನೀಡಿರುವ ಹೇಳಿಕೆಯೊಂದು ಈ ಮಾತಿಗೆ ಪುಷ್ಟಿ ನೀಡುವಂತಿದೆ.

ಶುಕ್ರವಾರ ರಾತ್ರಿ ಬಾಗೇಪಲ್ಲಿ ಪುರಸಭಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಧಿಕಾರಿಗಳ ಹಾಗೂ ಆಡಳಿತ ಮಂಡಳಿ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ನನಗೆ ಹಣ ಮಾಡಬೇಕು ಎಂಬ ಪರಿಸ್ಥಿತಿ ಇಲ್ಲ. ಹಾಗಾಗಿ ಈಗಲೂ ಆ ವಿಷಯದಲ್ಲಿ ಪರಿಶುದ್ಧನಾಗಿದ್ದೇನೆ. ಆದರೆ ನಾನು ಮಾಡಿದ ಮೊದಲ ತಪ್ಪು ಎಂದರೆ ಒಂದು ಪಕ್ಷ ತೊರೆದು ಮತ್ತೊಂದು ಪಕ್ಷ ಸೇರಿರುವುದು. ಅದರ ಅರಿವು ಈಗ ನನಗಾಗುತ್ತಿದೆ ಎಂದು ಪಶ್ಚಾತ್ತಾಪಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...