ಬೆಂಗಳೂರು: ಪಕ್ಷ ಸೇರ್ಪಡೆಗೂ ಮುನ್ನವೇ ಬಿಜೆಪಿ ರೌಡಿ ಶೀಟರ್ ಗೆ ಮಣೆ ಹಾಕಿದ್ದು, ಪುರಸಭೆಗೆ ನಾಮನಿರ್ದೇಶನ ಮಾಡುವ ಮೂಲಕ ರೌಡಿಶೀರ‍್ ಒಬ್ಬನನ್ನು ಆಯ್ಕೆ ಮಾಡಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.
ರೌಡಿ ಶೀಟರ್ ಹಿನ್ನೆಲೆಯುಳ್ಳವರಿಗೆ ಬಿಜೆಪಿಗೆ ಸೇರಿಸಿಕೊಳ್ಳಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದ ಬೆನ್ನಲ್ಲೇ ಪುರಸಭೆಯಲ್ಲಿ ರೌಡಿಶೀಟರ್ ಮಂಜುನಾಥ್ ಅಲಿಯಾಸ್ ಉಪ್ಪಿ ಆಯ್ಕೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.
ಬೆಂಗಳೂರು ನಗರ ಜಿಲ್ಲೆ ಆನೇಕಲ್ ಪುರಸಭೆಯ ನಾಮನಿರ್ದೇಶಿತ ಸದಸ್ಯನನ್ನಾಗಿ ರೌಡಿಶೀಟರ್ ಮಂಜುನಾಥ್ ನನ್ನು ಆಯ್ಕೆ ಮಾಡಲಾಗಿದೆ. ಮೂರು ದಿನಗಳ ಹಿಂದಷ್ಟೇ ರೌಡಿ ಶೀಟರ್ ಮಂಜುನಾಥ್ ನನ್ನು ಬಿಜೆಪಿ ಆಯ್ಕೆ ಮಾಡಿದ್ದು, ಈತ ನಖರಬಾಬು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ರೌಡಿಶೀಟರ್ ಗೆ ಪುರಸಭೆ ಸದಸ್ಯನ ಪಟ್ಟ ನೀಡಿರುವುದು ವಿಪಕ್ಷಗಳ ಹಾಗೂ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.