ಆನೇಕಲ್: ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ಅಂಗಡಿಗಳ ಮೇಲೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.
ಲೈಸೆನ್ಸ್ ಇಲ್ಲದೇ ಪಟಾಕಿ ಮಾರಾಟ ಮಾಡುತ್ತಿದ್ದ ಹಾಗೂ ನಕಲಿ ದಾಖಲೆ ಸೃಷ್ಟಿಸಿ ಪಟಾಕಿ ಮಾರುತ್ತಿದ್ದ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಪಟಾಕಿ ಅಂಗಡಿಗಳ ಮೇಲೆ ದಾಳಿ ನಡೆಸಿರುವ ಪೊಲೀಸರು, ಅಂಗಡಿಗಳನ್ನು ಮುಚ್ಚಿಸಿ ಕ್ರಮ ಕೈಗೊಂಡಿದ್ದಾರೆ.
ಅಗ್ನಿಶಾಮಕ ಇಲಾಖೆ ಅಧಿಕಾರಿ ನಾಗೇಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ನಿಯಮಗಳನ್ನು ಉಲ್ಲಂಘನೆ ಮಾಡಿ ಪಟಾಕಿ ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.