ಮೈಸೂರು: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆಯೇ ಅಂಗಡಿ ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರಿನ ಹೆಬ್ಬಾಳುವಿನಲ್ಲಿ ನಡೆದಿದೆ.
ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಪಟಾಕಿ ಅಂಗಡಿಯ ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದ್ದು, ಅಪಾರ ಹಾನಿ ಸಂಭವಿಸಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.