ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪಟಾಕಿ ಅವಘಡ ಹೆಚ್ಚುತ್ತಿದ್ದು, ನಾಲ್ವರು ಮಕ್ಕಳು ಗಾಯಗೊಂಡಿದ್ದು, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.
ಮಿಂಟೋ ಕಣ್ಣಿನ ಆಸ್ಪತ್ರೆಯ ಡಾ.ವೀಣಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈಗಾಗಲೇ ಮೂವರಿಗೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. ಅವರಿಗೆ ಕಣ್ಣಿಗೆ ಯಾವುದೇ ಗಂಭೀರ ಸಮಸ್ಯೆಯಿಲ್ಲ. ಆದರೆ ಓರ್ವ ಬಾಲಕನಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.
15 ವರ್ಷದ ಬಾಲಕನ ಮುಖ ಸುಟ್ಟು ಹೋಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.