alex Certify BIG NEWS: ಪಠ್ಯಪುಸ್ತಕಗಳನ್ನು ’ಪಕ್ಷಪುಸ್ತಕʼಗಳನ್ನಾಗಿ ಮಾಡುವ ಹುನ್ನಾರ; ಭಗತ್ ಸಿಂಗ್ ಪಾಠಕ್ಕೆ ಕೊಕ್; ಹೆಡ್ಗೆವಾರ್ ಭಾಷಣ ಸೇರಿಸಿದ ಸರ್ಕಾರ; ಇದು ಬಿಜೆಪಿ ಮತ್ತವರ ಪಟಾಲಂ ವಿಕೃತಿಯ ಪರಾಕಾಷ್ಠೆ; HDK ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಠ್ಯಪುಸ್ತಕಗಳನ್ನು ’ಪಕ್ಷಪುಸ್ತಕʼಗಳನ್ನಾಗಿ ಮಾಡುವ ಹುನ್ನಾರ; ಭಗತ್ ಸಿಂಗ್ ಪಾಠಕ್ಕೆ ಕೊಕ್; ಹೆಡ್ಗೆವಾರ್ ಭಾಷಣ ಸೇರಿಸಿದ ಸರ್ಕಾರ; ಇದು ಬಿಜೆಪಿ ಮತ್ತವರ ಪಟಾಲಂ ವಿಕೃತಿಯ ಪರಾಕಾಷ್ಠೆ; HDK ಆಕ್ರೋಶ

ಬೆಂಗಳೂರು: 10ನೇ ತರಗತಿ ಪಠ್ಯದಲ್ಲಿ ಆರ್.ಎಸ್.ಎಸ್ ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರಿಸಿರುವ ಸರ್ಕಾರದ ಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಪಠ್ಯಪುಸ್ತಕಗಳನ್ನು ʼಪಕ್ಷಪುಸ್ತಕʼಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರಕ್ಕೆ ನನ್ನ ಧಿಕ್ಕಾರವಿದೆ. ಬಿಜೆಪಿಯ ನೈಜ ಬಣ್ಣದ ವಿಸ್ತೃತರೂಪವೇ ಆಯ್ದ ಪಠ್ಯಗಳನ್ನು ಟಾರ್ಗೆಟ್‌ ಮಾಡಿ ಡಿಲೀಟ್‌ ಮಾಡುವುದು ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯ ಈ ಬುಡಮೇಲು ಕೃತ್ಯಗಳ ಬಗ್ಗೆ ನನಗೆ ಅಚ್ಚರಿಯೇನೂ ಇಲ್ಲ. ನನ್ನ ಜತೆ ಮೈತ್ರಿ ಸರಕಾರ ಮಾಡಿದಾಗ ಅವರ ಬೇಳೆ ಬೇಯಲಿಲ್ಲ. ʼಆಪರೇಷನ್‌ ಕಮಲʼದ ಅನೈತಿಕ ಮಾರ್ಗದಲ್ಲಿ ಅಧಿಕಾರಕ್ಕೆ ಬಂದ ʼಸ್ವಘೋಷಿತ ಡೋಂಗಿ ರಾಷ್ಟ್ರಭಕ್ತರುʼ ಇನ್ನೇನು ಮಾಡಲು ಸಾಧ್ಯ? ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಕೈ ಬೀಸಿ ಕರೆಯುವ ʼಕಾರವಾರʼ ಕಡಲತೀರ

ಮಹಾನ್‌ ರಾಷ್ಟ್ರಪ್ರೇಮಿ, ಬ್ರಿಟೀಷರಿಗೆ ಸಿಂಹಸ್ವಪ್ನ, ಭಾರತಮಾತೆಯ ಹೆಮ್ಮೆಯ ಪುತ್ರ ಸರ್ದಾರ್‌ ಭಗತ್‌ ಸಿಂಗ್‌ ಅವರ ಪಠ್ಯಕ್ಕೆ ಕೊಕ್‌ ಕೊಟ್ಟು, ಆರೆಸ್ಸೆಸ್‌ ಸಂಸ್ಥಾಪಕ ಹೆಡಗೇವಾರ್‌ ಕುರಿತ ಮಾಹಿತಿಯನ್ನು ಪಠ್ಯಕ್ಕೆ ತುರುಕುತ್ತಿರುವ ಬಿಜೆಪಿ ಮತ್ತವರ ಪಟಾಲಂ ವಿಕೃತಿಗೆ ಇದು ಪರಾಕಾಷ್ಠೆ. ಭಗತ್‌ ಸಿಂಗ್‌ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿ ಗಲ್ಲಿಗೇರಿದರು. ಸಂಘ ಪರಿವಾರಿಗಳು ಅದೇ ಬ್ರಿಟೀಷರಿಗೆ ಪರಿಚಾರಿಕೆ ಮಾಡಿಕೊಂಡು ಸ್ವಾತಂತ್ರ್ಯಕ್ಕಿಂತ ಗುಲಾಮಗಿರಿಯೇ ಲೇಸೆಂದುಕೊಂಡಿದ್ದರು. ಇಂಥವರು, ಭಗತ್‌ ಸಿಂಗ್‌ʼರಂಥ ರಾಷ್ಟ್ರಪ್ರೇಮಿಗಳನ್ನು ಸಹಿಸಿಕೊಳ್ಳುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ, ಚಾರಿತ್ರ್ಯಹೀನತೆಯೇ ಮೈವೇತ್ತ ಬಿಜೆಪಿಗೆ ರಾಜ್ಯದ ಬೆಳವಣಿಗೆಯಲ್ಲಿ ನಂಬಿಕೆ ಇಲ್ಲ. ಹಿಜಾಬ್‌, ಆಹಾರ, ವ್ಯಾಪಾರ, ಹಲಾಲ್‌ ಎಲ್ಲಾ ಆಯಿತು. ಈಗ ಪಠ್ಯಕ್ಕೆ ನೇತಾಡುತ್ತಿದೆ. ಅಭಿವೃದ್ಧಿ ಎಂದರೆ ಆ ಪಕ್ಷಕ್ಕೆ ಅಪಥ್ಯ. ಬಿಜೆಪಿಗರು ಮತ್ತು ಬ್ರಿಟೀಷರು ಇಬ್ಬರೂ ಒಂದೇ. ಒಡೆದು ಆಳುವುದೇ ಇವರ ನೀತಿ & ಧರ್ಮ. ಬ್ರಿಟೀಷ್‌ ಪರಂಪರೆಯನ್ನು ಬಿಜೆಪಿಗರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲೂ ಮುಂದುವರಿಸಿದ್ದಾರೆ. ಜನರ ಸ್ವಾತಂತ್ರ್ಯವನ್ನು ಸಹಿಸಲು ಅವರಿಗೆ ಆಗುತ್ತಿಲ್ಲ. ಪಠ್ಯವನ್ನು ವಿಕೃತಿಗೊಳಿಸುತ್ತಿರುವುದು ಎಂದರೆ, ಕನ್ನಡ ಆಸ್ಮಿತೆಯನ್ನು ಹತ್ತಿಕ್ಕುವ ಪಾತಕ ಯತ್ನ. ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು, ಪ್ರಶ್ನಿಸಬೇಕು. ಹೋರಾಟಕ್ಕೂ ಇಳಿಯಬೇಕು.
“ಅಯ್ಯೋ.. ಕರ್ನಾಟಕ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ!!” ಎಂದು ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...