alex Certify BIG NEWS: ಪಠ್ಯ ಕಡಿತ ಕುರಿತಂತೆ ಶಿಕ್ಷಣ ಸಚಿವರ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಠ್ಯ ಕಡಿತ ಕುರಿತಂತೆ ಶಿಕ್ಷಣ ಸಚಿವರ ಮಹತ್ವದ ಹೇಳಿಕೆ

ಕಳೆದ ವರ್ಷ ದೇಶದಲ್ಲಿ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಬಹುತೇಕ ಎಲ್ಲ ಕ್ಷೇತ್ರಗಳನ್ನು ಇನ್ನಿಲ್ಲದಂತೆ ಕಾಡಿದೆ. ಅದರಲ್ಲೂ ಶಿಕ್ಷಣ ಕ್ಷೇತ್ರಕ್ಕೆ ದೊಡ್ಡ ಹೊಡೆತ ಬಿದ್ದಿದ್ದು, ವಿದ್ಯಾರ್ಥಿಗಳು ಸರಿಯಾಗಿ ಶಾಲೆಗೆ ಹೋಗದೆ ವರ್ಷಗಳೇ ಕಳೆಯುತ್ತಾ ಬಂದಿದೆ. ಇದೀಗ ಕೊರೊನಾ ಎರಡನೇ ಅಲೆ ಇಳಿಕೆಯಾಗುತ್ತಿರುವುದರ ಹಿನ್ನಲೆಯಲ್ಲಿ 9 ರಿಂದ ಮೇಲ್ಪಟ್ಟ ತರಗತಿಗಳನ್ನು ಆರಂಭಿಸಲಾಗಿದೆ.

ಆದರೆ ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗಲು ಸುಮಾರು ಮೂರು ತಿಂಗಳು ತಡವಾಗಿದ್ದರ ಹಿನ್ನೆಲೆಯಲ್ಲಿ ಪಠ್ಯ ಕಡಿತ ಮಾಡಬೇಕು ಎಂಬ ಕೂಗು ಪೋಷಕರು ಹಾಗೂ ವಿದ್ಯಾರ್ಥಿ ವಲಯದಿಂದ ಕೇಳಿ ಬಂದಿತ್ತು. ಈ ಕುರಿತಂತೆ ಇದೀಗ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ‌.ಸಿ. ನಾಗೇಶ್ ಮಹತ್ವದ ಹೇಳಿಕೆ ನೀಡಿದ್ದಾರೆ.

BREAKING: ಇತಿಹಾಸ ನಿರ್ಮಿಸಿದ ಭಾವಿನಾ ಬೆನ್ ಪಟೇಲ್ ಫೈನಲ್ ಗೆ ಎಂಟ್ರಿ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಬಿ.ಸಿ. ನಾಗೇಶ್, ಪ್ರಸಕ್ತ ಶೈಕ್ಷಣಿಕ ವರ್ಷ ಪಠ್ಯ ಪುಸ್ತಕದಲ್ಲಿ ಕಡಿತ ಮಾಡುವ ಯಾವುದೇ ಉದ್ದೇಶವನ್ನು ಸರ್ಕಾರ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತರಗತಿಗಳು ಮೂರು ತಿಂಗಳು ತಡವಾಗಿ ಆರಂಭವಾಗಿದ್ದರೂ ಸಹ ನಿಗದಿತ ಸಮಯದೊಳಗೆ ಪಠ್ಯ ಪೂರ್ಣಗೊಳಿಸಲು ರಜೆ ಕಡಿತ ಮಾಡುವ ಇಂಗಿತವನ್ನು ಸಚಿವರು ವ್ಯಕ್ತಪಡಿಸಿದ್ದಾರೆ.

ಮಕ್ಕಳಿಗೆ ಪಾಠ ಹೇಳಿಕೊಡಲು ಶಿಕ್ಷಕರು ಸಿದ್ದವಿದ್ದಾರೆ. ಹೀಗಾಗಿ ಅದಕ್ಕಾಗಿ ವೇಳಾಪಟ್ಟಿ ಸಿದ್ದಪಡಿಸುವಂತೆ ಸೂಚಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ. ಕಳೆದ ವರ್ಷ ಕೊರೊನಾ ಮೊದಲನೇ ಅಲೆ ಕಾರಣಕ್ಕೆ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪಠ್ಯ ದಲ್ಲಿ ಶೇಕಡಾ 30 ರಷ್ಟು ಕಡಿತ ಮಾಡಲಾಗಿತ್ತು. ಕೊರೊನಾ ಎರಡನೇ ಅಲೆ ಕಾರಣಕ್ಕೆ ಈ ಬಾರಿ ತರಗತಿಗಳು ಮೂರು ತಿಂಗಳು ತಡವಾಗಿ ಆರಂಭವಾಗಿದ್ದರ ಕಾರಣ ಪಠ್ಯ ಕಡಿತ ಮಾಡುವಂತೆ ಒತ್ತಾಯ ಕೇಳಿಬಂದಿತ್ತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...