ಬೆಂಗಳೂರು: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದ್ದು, ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಚರ್ಚೆ ನಡೆಸಿದರು.
ಸಿಎಂ ಭೇಟಿ ಬಳಿಕ ಮಾತನಾಡಿದ ಸಚಿವರು, ಪಠ್ಯ ಪರಿಷ್ಕರಣೆ ಸಂಬಂಧ 2 ನಿರ್ಧಾರ ಕೈಗೊಂಡಿದ್ದೇವೆ. ಈ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಿದ್ದೇವೆ. ಹಿಂದಿನ ಪಠ್ಯ ಪುಸ್ತಕ ಸಮಿತಿ ಪಠ್ಯಕ್ಕೆ ಕತ್ತರಿ ಹಾಕಿದ್ದು ಸರಿಯೋ ? ನಾವು ಮಾಡಿದ್ದು ಸರಿಯೋ ? ಜನರೇ ನಿರ್ಧಾರ ಮಾಡಲಿ ಎಂದು ಹೇಳಿದ್ದಾರೆ.
ಸಾರ್ವಜನಿಕರೇ ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಯಾವುದು ಸರಿ ಯಾವುದು ತಪ್ಪು ಎಂಬುದನ್ನು ನಿರ್ಧರಿಸಲಿ ಎಂದು ತಿಳಿಸಿದರು.