ಉಡುಪಿ: ಶಾಲಾ ಪಠ್ಯಪುಸ್ತಕಗಳಲ್ಲಿ ಹೆಡ್ಗೆವಾರ್ ಸೇರ್ಪಡೆ ವಿಚಾರ ರಾಜಕೀಯ ನಾಯಕರ ವಾಕ್ಸಮರಕ್ಕೆ ಕಾರಣವಾಗಿದ್ದು, ಪಠ್ಯ ಪುಸ್ತಕಗಳ ವಿಚಾರದಲ್ಲಿ ಸಂಘರ್ಷಕ್ಕೆ ಯತ್ನಿಸಲಾಗುತ್ತಿದೆ. ಸಮಾಜದಲ್ಲಿ ಭಾವೈಕ್ಯತೆ ಹಾಳಾಗುವ ರೀತಿಯಲ್ಲಿ ನಡೆದುಕೊಳ್ಳಲಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಪಠ್ಯದಲ್ಲಿ ಕೆಲ ಮಹನೀಯರ ವಿಷಯ ವೈಭವೀಕರಿಸಲಾಗುತ್ತಿದೆ. ಪಠ್ಯಪುಸ್ತಕವನ್ನು ಪಕ್ಷ ಪುಸ್ತಕವನ್ನಾಗಿಸಿ, ಕೇಸರಿಕರಣ ಮಾಡಲು ಹೊರಟಿದ್ದಾರೆ. ಸತ್ಯಾಂಶ ತಿರುಚುವ ಮೂಲಕ ಬದಲಾವಣೆಗೆ ಪ್ರಯತ್ನ ಮಾಡುತ್ತಿದ್ದಾರೆ. ರಾಜಕಾರಣದ ಹಿಡನ್ ಅಜಂಡಾದಿಂದ ಮಕ್ಕಳ ಶಿಕ್ಷಣದ ಮೇಲೆ ಪ್ರಭಾವ ಬೀರಲಾಗುತ್ತಿದೆ ಎಂದು ಕಿಡಿಕಾರಿದರು.
ಇದು ಶಿಕ್ಷಣ ಕ್ಷೇತ್ರದಲ್ಲಿ ಸಂಘರ್ಷ ಗೊಂದಲ ಮೂಡಿಸುವ ಕೆಲಸವಾಗಿದೆ. ಉಡುಪಿಯಲ್ಲಿ ಹಿಜಾಬ್ ವಿಚಾರವಾಗಿ ಸಂಘರ್ಷ ನಡೆಯಿತು. ಈಗ ಪಠ್ಯ ಪುಸ್ತಕ ವಿಚಾರದಲ್ಲಿ ಸಂಘರ್ಷ ಸೃಷ್ಟಿಸುತ್ತಿದ್ದಾರೆ. ಸಮಾಜದಲ್ಲಿ ಭಾವೈಕ್ಯತೆ ಹಾಳಾಗುವ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.