ಬೆಂಗಳೂರು: ತೀವ್ರ ವಿವಾದಕ್ಕೆ ಕಾರಣವಾಗಿರುವ ಪಠ್ಯ ಪುಸ್ತಕ ಪರಿಷ್ಕರಣೆ ರದ್ದುಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ನಾಯಕರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ಪಠ್ಯ ಪುಸ್ತಕದಲ್ಲಿ ಮಹನೀಯರಿಗೆ ಅವಮಾನ ಮಾಡಲಾಗಿದೆ. ನಾರಾಯಣಗುರು, ಅಂಬೇಡ್ಕರ್, ಬಸವಣ್ಣ, ಕುವೆಂಪು ಸೇರಿದಂತೆ ಹಲವು ಮಹಾನ್ ನಾಯಕರ ಕುರಿತ ಮಾಹಿತಿ ಮೊಟಕುಗೊಳಿಸಲಾಗಿದೆ. ಅನಗತ್ಯ ವಿಚಾರಗಳನ್ನು ಸೇರಿಸಿ ಮಕ್ಕಳಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡಲಾಗುತ್ತಿದೆ. ಹೊಸ ಪಠ್ಯ ಪುಸ್ತಕ ಕೈಬಿಟ್ಟು ಹಳೆಯ ಪಠ್ಯವನ್ನೇ ಮುಂದುವರೆಸಬೇಕು ಎಂದು ಒತ್ತಾಯಿಸಿದ್ದಾರೆ.