ಉಡುಪಿ: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಬೆನ್ನಲ್ಲೇ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ವಾಮೀಜಿಗಳು ಪತ್ರ ಬರೆದು ಆಗ್ರಹಿಸಿದ್ದು, ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ.
ಪಠ್ಯ ಪುಸ್ತಕ ಪರಿಷ್ಕರಣೆ ಬೆನ್ನಲ್ಲೇ ರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆಗೆ ಪಠ್ಯ ಪರಿಷ್ಕರಣೆ ಸಮೀತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವಮಾನ ಮಾಡಿರುವ ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ಮಲಾನಂದ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಪತ್ರ ಬರೆದು ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಶಿಕ್ಷಣ ಸಚಿವರ ವರದಿ ಬಳಿಕ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಹೆಡ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ; 6 ಜನರ ವಿರುದ್ಧ FIR ದಾಖಲು
ಸ್ವಾಮೀಜಿಗಳು ಪತ್ರ ಬರೆದಿರುವ ವಿಚಾರವಾಗಿ ವರದಿ ನೀಡುವಂತೆ ಶಿಕ್ಷಣ ಸಚಿವರಿಗೆ ಸೂಚಿಸಿದ್ದೇನೆ. ಪಠ್ಯ ಪರೀಷ್ಕರಣೆಯ ಸರಿ, ತಪ್ಪುಗಳ ಬಗ್ಗೆಯೂ ಚರ್ಚೆ ನಡೆದಿದೆ. ಈ ಎಲ್ಲದರ ಬಗ್ಗೆಯೂ ನಾಳೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ವರದಿ ನೀಡಲಿದ್ದಾರೆ. ವರದಿ ಬಂದ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.