ಬೆಂಗಳೂರು: ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಮಾಡಲಾಗಿದೆಯಷ್ಟೆ. ರದ್ದು ಮಾಡಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಹಿರಿಯೂರು ತಾಲೂಕಿನ ದೇವರಕೊಟ್ಟ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪಠ್ಯ ಪುಸ್ತಕ ಪರಿಷ್ಕರಣೆಗೆ ಹೊಸ ಸಮಿತಿ ರಚನೆಯ ಅವಶ್ಯಕತೆ ಇಲ್ಲ. ಈಗಿರುವ ಸಮಿತಿ ರದ್ದಾಗಿಲ್ಲ, ವಿಸರ್ಜಿಸಲಾಗಿದೆ ಎಂದು ಹೇಳಿದರು.
BIG NEWS: ಪಠ್ಯ ಪುಸ್ತಕ ಸಮಿತಿಯಿಂದ ಮತ್ತೊಂದು ಎಡವಟ್ಟು; ಎರಡೂ ತರಗತಿಗಳಿಗೆ ಒಂದೇ ಪದ್ಯ
ಬಸವಣ್ಣನವರ ಪಠ್ಯದಲ್ಲಿ ಒಂದು ಲೈನ್ ವ್ಯತ್ಯಾಸವಾಗಿದೆ. ಬಸವಣ್ಣನವರ ಪಠ್ಯದ ವ್ಯತ್ಯಾಸ ಸರಿಪಡಿಸುತ್ತೇವೆ. ಉಳಿದಂತೆ ಬರಗೂರು ಸಮಿತಿ ರಚಿಸಿದ್ದ ಪಠ್ಯದಲ್ಲಿ ಇದ್ದಂತೆಯೇ ಇದೆ. ನಮ್ಮದು ಬಸವ ಪಥದ ಸರ್ಕಾರ. ಬಸವಣ್ಣನವರು ರಚಿಸಿರುವ ಹಲವಾರು ವಚನ, ತತ್ವಾದರ್ಶಗಳಿವೆ. ಅದರಂತೆಯೇ ನಾವು ನಡೆದುಕೊಳ್ಳುವ ಯತ್ನ ಮಾಡಿದ್ದೇವೆ. ಶೀಘ್ರದಲ್ಲಿಯೇ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಒದಗಿಸುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.