alex Certify Big News: ಪತ್ನಿಯ ಶೀಲ ಶಂಕಿಸಿ ಬರ್ಬರವಾಗಿ ಹತ್ಯೆ ಮಾಡಿದ ಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big News: ಪತ್ನಿಯ ಶೀಲ ಶಂಕಿಸಿ ಬರ್ಬರವಾಗಿ ಹತ್ಯೆ ಮಾಡಿದ ಪತಿ

 

ತನ್ನ ಪತ್ನಿಯ ಶೀಲದ ಕುರಿತು ಶಂಕೆ ಹೊಂದಿದ್ದ ವ್ಯಕ್ತಿಯೊಬ್ಬ ಆಕೆಯ ರುಂಡ-ಮುಂಡ ಬೇರ್ಪಡಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಪೊಲೀಸ್ ಠಾಣಾ ವ್ಯಾಪ್ತಿಯ ಚಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ.

ದೇವರಾಜ್ ಎಂಬಾತ ತನ್ನ ಎರಡನೇ ಪತ್ನಿ 40 ವರ್ಷದ ಪುಟ್ಟಮ್ಮಳನ್ನು ಹತ್ಯೆ ಮಾಡಿದ್ದು, ಈ ಹಿಂದೆ ಈತ ತನ್ನ ಮೊದಲ ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿದ್ದ ಎನ್ನಲಾಗಿದೆ.

ಎರಡನೇ ಪತ್ನಿ ಪುಟ್ಟಮ್ಮ ಪರಪುರುಷರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆಂಬ ಶಂಕೆ ಹೊಂದಿದ್ದ ದೇವರಾಜ್ ಪದೇ ಪದೇ ಜಗಳವಾಡುತ್ತಿದ್ದ ಎನ್ನಲಾಗಿದೆ.

ಇದೇ ಕಾರಣಕ್ಕೆ ಮತ್ತೆ ಜಗಳ ತೆಗೆದ ದೇವರಾಜ್ ರುಂಡ-ಮುಂಡ ಬೇರ್ಪಡಿಸಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಮಗಳು ಪವಿತ್ರ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ವರುಣಾ ಠಾಣೆ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...