alex Certify BIG NEWS: ಪತ್ನಿ ಜೊತೆ ಕಾಶಿ ವಿಶ್ವನಾಥ ದರ್ಶನ ಪಡೆದ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿ ಜೊತೆ ಕಾಶಿ ವಿಶ್ವನಾಥ ದರ್ಶನ ಪಡೆದ ಸಿಎಂ ಬೊಮ್ಮಾಯಿ

ವಾರಾಣಸಿ: ಉತ್ತರ ಪ್ರದೇಶದ ವಾರಣಾಸಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಪತ್ನಿ ಚನ್ನಮ್ಮ ಅವರೊಂದಿಗೆ ಕಾಶಿ ವಿಶ್ವನಾಥ ಮಂದಿರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಇಂದು ಮುಂಜಾನೆ ಕಾಶಿ ವಿಶ್ವನಾಥ ಮಂದಿರಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ಹಾಗೂ ಚನ್ನಮ್ಮ ಬೊಮ್ಮಾಯಿ ಕಾಶಿ ವಿಶ್ವನಾಥನಿಗೆ ಪೂಜೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಿಎಂ, ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ ವಿಚಾರವಾಗಿ ಮಾತನಾಡುತ್ತಾ, ಮೋದಿ ಅವರ ವಿಷನ್, ಸರ್ಕಾರ ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಕಾಶಿಯೇ ಉತ್ತಮ ಉದಾಹರಣೆ ಎಂದರು.

ಈ ಸಾಧನೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ಪಾತ್ರ ಮಹತ್ವದ್ದು. ಇಂದು ಪ್ರಧಾನಿ ಮೋದಿಯವರೊದಿಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆಯಲಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...