ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಪತ್ನಿಯ ಶೋಕಿ ಜೀವನಕ್ಕೆ ಬೇಸತ್ತ ಪತಿ ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಆನೇಕಲ್ ನ ಕೊಪ್ಪ ಸಮೀಪದ ನಿರ್ಮಾಣ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮೇ 10ರಂದು ನಡೆದಿದ್ದ ಆತ್ಮಹತ್ಯೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಮೊದಲು ಮಕ್ಕಳಿಬ್ಬರಿಗೆ ನೇಣು ಬಿಗಿದು ಕೊಂದಿರುವ ಹರೀಶ್ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 6 ವರ್ಷದ ಪ್ರಜ್ವಲ್ ಹಾಗೂ 4 ವರ್ಷದ ರಿಷಬ್ ಮೃತ ಮಕ್ಕಳು.
ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.