ಬಳ್ಳಾರಿ: ಶೀಲ ಶಂಕಿಸಿ ಪತ್ನಿಯನ್ನು ಹತ್ಯೆಗೈದ ಪತಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ನಡೆದಿದೆ.
ಸಂಡೂರು ತಾಲೂಕಿನ ಜೀಗೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಡಗೋಲಿನಿಂದ ಪತ್ನಿ ರೇಖಾಳನ್ನು ಪತಿ ಹತ್ಯೆಗೈದಿದ್ದಾನೆ. ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಮಾರಸ್ವಾಮಿ ಪತ್ನಿಯನ್ನೇ ಕೊಲೆಗೈದು, ನೇಣಿಗೆ ಶರಣಾದ ವ್ಯಕ್ತಿ. ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.