ಕೊರೊನಾ ಮೊದಲ ಮತ್ತು ಎರಡನೇ ಅಲೆ ಶೈಕ್ಷಣಿಕ ವಲಯದಲ್ಲಿ ಸಾಕಷ್ಟು ಪರಿಣಾಮಗಳನ್ನು ಬೀರಿದೆ. ವಿದ್ಯಾರ್ಥಿಗಳು ಕಳೆದ ಒಂದು ವರ್ಷದಿಂದ ಶಾಲಾ – ಕಾಲೇಜಿನ ಮುಖವನ್ನೇ ನೋಡದ ಪರಿಸ್ಥಿತಿ ಬಂದೊದಗಿದೆ. ಇದೀಗ ಕೊರನಾ ಎರಡನೇ ಅಲೆ ಅಬ್ಬರ ತಗ್ಗಿದ್ದು, ಹೀಗಾಗಿ ಇತರೆ ಚಟುವಟಿಕೆಗಳು ಆರಂಭವಾಗಿದ್ದರೂ ಸಹ ಶಾಲಾ – ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿಲ್ಲ.
ಇದರ ಮಧ್ಯೆ ಮೂರನೇ ಅಲೆಯ ಭೀತಿಯೂ ಕಾಡತೊಡಗಿದ್ದು, ಹೀಗಾಗಿ ಈ ಬಾರಿಯೂ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ಅನಿವಾರ್ಯವಾಗಲಿದೆಯಾ ಎಂಬ ಪ್ರಶ್ನೆ ಮೂಡಿದೆ. ಆದರೆ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಗಿದ್ದು, ದ್ವಿತೀಯ ಪಿಯುಸಿ ಪ್ರವೇಶ ಪ್ರಕ್ರಿಯೆ ಆರಂಭಕ್ಕೆ ಸೂಚನೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹ ಲ್ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಜುಲೈ 7ರಿಂದ ಕಡ್ಡಾಯವಾಗಿ ಕಾಲೇಜುಗಳಿಗೆ ಹಾಜರಾಗುವಂತೆ ಆದೇಶಿಸಿದ್ದಾರೆ.
ಆನ್ಲೈನ್ ತರಗತಿ ಆರಂಭಿಸಬೇಕಿರುವ ಹಿನ್ನೆಲೆಯಲ್ಲಿ ಉಪನ್ಯಾಸಕರು ತಮ್ಮ ವಿಷಯದ ವಿದ್ಯಾರ್ಥಿಗಳ ಸಂಪರ್ಕ ಸಂಖ್ಯೆಗಳನ್ನು ಕಡ್ಡಾಯವಾಗಿ ಸಂಗ್ರಹಿಸಿಟ್ಟುಕೊಳ್ಳುವಂತೆ ತಿಳಿಸಲಾಗಿದೆ.