alex Certify BIG NEWS: ಪದವೀಧರ, ಶಿಕ್ಷಕ ಕ್ಷೇತ್ರದ ಚುನಾವಣೆ; ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪದವೀಧರ, ಶಿಕ್ಷಕ ಕ್ಷೇತ್ರದ ಚುನಾವಣೆ; ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ಶಾಸಕ

ಬೆಳಗಾವಿ: ವಿಧಾನ ಪರಿಷತ್ ನ 4 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಶಾಸಕ ಅನಿಲ್ ಬೆನಕೆ ಮತ್ತೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.

ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮತದಾನ ನಡೆಯುತ್ತಿದ್ದು, ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಮತಗಟ್ಟೆಯಲ್ಲಿ ಬಿಜೆಪಿ ಶಾಸಕ ಅನಿಲ್ ಬೆನಕೆ ನೀತಿ ಸಂಹಿತೆ ಉಲ್ಲಂಘಿಸಿ ಮತಗಟ್ಟೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಶಾಸಕರು ಮತಗಟ್ಟೆಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದು, ಮತದಾರರ ಆಕ್ರೋಶಕ್ಕೆ ಕಾರಣವಗಿದೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ವಿರುದ್ಧ ವಾರಂಟ್ ಜಾರಿಯಾಗಿತ್ತು. ಆದರೂ ಎಚ್ಚೆತ್ತುಕೊಳ್ಳದ ಶಾಸಕರು ಇದೀಗ ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...