alex Certify BIG NEWS: ಪರಿಷತ್ ಚುನಾವಣೆ; ಕಾಂಗ್ರೆಸ್ ಟಿಕೆಟ್ ಘೋಷಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪರಿಷತ್ ಚುನಾವಣೆ; ಕಾಂಗ್ರೆಸ್ ಟಿಕೆಟ್ ಘೋಷಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅಖಾಡ ರಂಗೇರಿದ್ದು, ಈಗಾಗಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ ಬಿಜೆಪಿ ಹಾಗೂ ಜೆಡಿಎಸ್ ಇನ್ನೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ.

ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನವಾಗಿದ್ದು, ಸಂಜೆ 4 ಗಂಟೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಲಿದೆ. ಆದರೂ ಕೊನೆ ಕ್ಷಣದವರೆಗೂ ಬಿಜೆಪಿ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿ ಘೋಷಿಸದಿರುವುದು ಅಚ್ಚರಿ ತಂದಿದೆ.

ಇನ್ನು ಕಾಂಗ್ರೆಸ್ ನಿಂದ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ್ ಹಾಗೂ ಕೆಪಿಸಿಸಿ ವಕ್ತಾರ ನಾಗರಾಜ್ ಯಾದವ್ ಅವರಿಗೆ ಟಿಕೆಟ್ ನೀಡಲಾಗಿದೆ. ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್.ಆರ್.ಪಾಟೀಲ್ ಅವರಿಗೆ ಇದರಿಂದ ಅಸಮಾಧಾನವಾಗಿದೆ.

ಬಿಜೆಪಿ ಅಚ್ಚರಿ ಅಭ್ಯರ್ಥಿಗಳ ಆಯ್ಕೆ: ಯಡಿಯೂರಪ್ಪರಿಗೆ ಬಿಗ್ ಶಾಕ್…? ವಿಜಯೇಂದ್ರಗೆ ಕೈತಪ್ಪಿದ ಟಿಕೆಟ್..?

ಅಲ್ಲದೇ ಅಬ್ದುಲ್ ಜಬ್ಬಾರ್ ಗೆ ಟಿಕೆಟ್ ನೀಡುವುದಕ್ಕಿಂತ ಹೊಸಬರಿಗೆ ಟಿಕೆಟ್ ಕೊಡಬಹುದಿತ್ತು. ಅವಕಾಶ ಕೊಟ್ಟವರಿಗೆ ಮತ್ತೆ ಮತ್ತೆ ಅವಕಾಶ ಕೊಡಲಾಗಿದೆ. ನಜೀರ್ ಅಹ್ಮದ್, ನಾಸೀರ್ ಅವರಿಗೆ ಕೊಡಬಹುದಿತ್ತು. ನಿಜವಾದ ಕಾರ್ಯಕರ್ತರಿಗೆ ಇದರಿಂದ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...