ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಸರ್ವೋದಯ ಶಿಕ್ಷಣ ಸಂಸ್ಥೆ ವಿವಾದ ಹಿನ್ನೆಲೆಯಲ್ಲಿ ಗಲಾಟೆ ನಡೆದಿತ್ತು. ಗಲಾಟೆಗೆ ಹೊರಟ್ಟಿ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿತ್ತು. ಈ ವಿಚಾರವಾಗಿ ಜನವರಿ 25ರಂದು ಪರಿಷತ್ ಸಭಾಪತಿ ಹೊರಟ್ಟಿ ವಿರುದ್ಧ ಧಾರವಾಡ ಗ್ರಾಮಿಣ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು.
BIG NEWS: ಇನ್ನು ನ್ಯಾಟೋ – ರಷ್ಯಾ ನೇರ ಮುಖಾಮುಖಿ; 3 ನೇ ವಿಶ್ವಯುದ್ಧದ ಸುಳಿವು ನೀಡಿದ ‘ದೊಡ್ಡಣ್ಣ’
ಸಭಾಪತಿ ವಿರುದ್ಧವೇ ಎಫ್ ಐ ಆರ್ ದಾಖಲಿಸಿ ಸಭಾಪತಿ ಹುದ್ದೆಗೆ ಅಪಮಾನ ಮಾಡಲಾಗಿದೆ. ಇನ್ಸ್ ಪೆಕ್ಟರ್ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯರು ಪಟ್ಟು ಹಿಡಿದಿದ್ದರು. ಈ ಎಲ್ಲಾ ಬೆಳವಣಿಗಗಳ ಬೆನ್ನಲ್ಲೇ ಇದೀಗ ಧಾರವಾಡ ಗ್ರಾಮೀಣ ಠಾಣೆ ಇನ್ಸ್ ಪೆಕ್ಟರ್ ಅವರನ್ನು ಸಸ್ಪೆಂಡ್ ಮಾಡಿ ಡಿಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.