
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಕಡಿಮೆಯಾಗುತ್ತಿದ್ದಂತೆ ರಾಜ್ಯ ಸರ್ಕಾರ ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆಯನ್ನು ಆರಂಭಿಸಿದ್ದು, ಶೈಕ್ಷಣಿಕ ಚಟುವಟಿಕೆಗಳು ಸಹ ಚುರುಕು ಪಡೆದುಕೊಂಡಿದೆ. ಇದರ ಮಧ್ಯೆ 10ನೇ ತರಗತಿ ಪರೀಕ್ಷೆಗೆ ದಿನಗಣನೆ ಸಮೀಪಿಸುತ್ತಿದೆ.
ಜುಲೈ 19 ಮತ್ತು ಜುಲೈ 22ರಂದು 10ನೇ ತರಗತಿ ಪರೀಕ್ಷೆ ನಡೆಯಲಿದ್ದು, ಇದಕ್ಕಾಗಿ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿರುವ ಮಧ್ಯೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಆ ದಿನಗಳಂದು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆ ಮತ್ತೊಂದು ಶಾಕ್…! ಪಕ್ಷ ತೊರೆಯಲಿದ್ದಾರಾ ಪ್ರಭಾವಿ ನಾಯಕ…?
ವಿದ್ಯಾರ್ಥಿಗಳು ಪರೀಕ್ಷೆಗೆ ತೆರಳುವಾಗ ಹಾಗೂ ಪರೀಕ್ಷೆಯನ್ನು ಮುಗಿಸಿ ಮನೆಗೆ ಮರಳುವಾಗ ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ಬಸ್ ನಿರ್ವಾಹಕರಿಗೆ ತೋರಿಸಿ ಈ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ತಿಳಿಸಲಾಗಿದೆ.