alex Certify BIG NEWS: ಪರೇಶ್ ಮೇಸ್ತಾ ಸಾವು ಪ್ರಕರಣ; ಮರು ತನಿಖೆ ಭರವಸೆ ಕೊಟ್ಟ ಸಚಿವ ಕೋಟ ಶ್ರೀನಿವಾಸ್ ಪೂಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪರೇಶ್ ಮೇಸ್ತಾ ಸಾವು ಪ್ರಕರಣ; ಮರು ತನಿಖೆ ಭರವಸೆ ಕೊಟ್ಟ ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ಕಾರವಾರ: ಪರೇಶ್ ಮೇಸ್ತಾ ಸಾವು ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಪರೇಶ್ ಮೇಸ್ತಾ ತಂದೆ ಕಮಲಾಕರ ಮೇಸ್ತಾ ಒತ್ತಾಯಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಕರಣ ಮರು ತನಿಖೆ ನಡೆಸಲಾಗುವುದು ಎಂದು ಸಚುವ ಕೋಟಾ ಶ್ರೀನಿವಾಸ್ ಪುಜಾರಿ ತಿಳಿಸಿದ್ದಾರೆ.

ಪರೇಶ್ ಮೇಸ್ತಾ ಸಾವಿನ ಬಗ್ಗೆ ಸಿಬಿಐ ಬಿ ರಿಪೋರ್ಟ್ ಸಲ್ಲಿಸಿದೆ. ಇದು ಕೊಲೆಯಲ್ಲ ಆಕಸ್ಮಿಕ ಸಾವು ಎಂದು ವರದಿ ನೀಡಿದೆ. ಆದರೆ ಮಗನ ಸಾವು ಸಹಜ ಸಾವಲ್ಲ ಕೊಲೆ ಎಂದು ಅನುಮಾನ ವ್ಯಕ್ತಪಡಿಸುತ್ತಿರುವ ಮೇಸ್ತಾ ತಂದೆ ಕಮಲಾಕರ, ನಿನ್ನೆ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮರು ತನಿಖೆಗೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಕಾರವಾರದಲ್ಲಿ ಮಾತನಾಡಿದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...